ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರ ಸಾವು

ನಗರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ...

ಬೆಂಗಳೂರು: ನಗರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಆಟೋ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದ ಕಾರು ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾವೇರಿನಗರದ ರಾಜಶೇಖರ್ (35) ಮೃತ ಕಾರು ಚಾಲಕ, ಭುವನೇಶ್ವರನಗರ ಮುಖ್ಯರಸ್ತೆಯಲ್ಲಿ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದ ರಾಜಶೇಖರ್ ಗೆ ಎದುರುಗಡೆಯಿಂದ ಬಂದ ಆಟೋ ಡಿಕ್ಕಿ  ಹೊಡೆದಿದೆ.

ಇದರಿಂದ ಕೆಳಗೆ ಬಿದ್ದ ರಾಜಶೇಖರ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ  ರಾತ್ರಿ ಮೃತಪಟ್ಟಿದ್ದಾರೆ. ಪ್ರಕರಣ ಹೆಬ್ಬಾಳ ಸಂಚಾರ ಠಾಣೆಯಲ್ಲಿ ದಾಖಲಾಗಿದ್ದು, ಆಟೋ ಚಾಲಕನನ್ನು ಶಕ್ಕೆ ಪಡೆಯಲಾಗಿದೆ.

ಬೈಕ್ ಗೆ ಕಾರು ಡಿಕ್ಕಿ
ಮತ್ತೊಂದು ಪ್ರಕರಣದಲ್ಲಿ ಬಸವೇಶ್ವರ ನಗರದ ಮುಖ್ಯ ಜಂಕ್ಷನ್ ಬಳಿ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗುತ್ತಿಗೆದಾರ ಬೋರೇಗೌಡ (43) ಮೃತಪಟ್ಟಿದ್ದಾರೆ. ಪೀಣ್ಯದ ಜಿಕೆಡಬ್ಲ್ಯೂ, ಬಡಾವಣೆ  ನಿವಾಕಸಿಯಾದ ಬೋರೇಗೌಡ ಸಿದ್ದಯ್ಯ ಪುರಾಣಿಕ್ ರಸ್ತೆ ಸೇರುವ ಬಸವೇಶ್ವರ ನಗರದ 6ನೇ ಮೇಯಿನ್ ಜಂಕ್ಷನ್ ಮಾರ್ಗವಾಗಿ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಸಿದ್ದಯ್ಯ ಪುರಾಣಿಕ್  ರಸ್ತೆ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಬೋರೋಗೌಡರನ್ನು ಆಸ್ಪತ್ರೆಗೆ ದಾಖಲಿಸಲಾಗಿಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)