ಜಿಲ್ಲಾ ಸುದ್ದಿ

ಎಟಿಎಂ ದೋಚಲು ಯತ್ನ: ಇಬ್ಬರ ಬಂಧನ

ಇಂದಿರಾನಗರ ಸಿಎಂಎಚ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿ ಹಣ ದೋಚಲು...

ಬೆಂಗಳೂರು: ಇಂದಿರಾನಗರ ಸಿಎಂಎಚ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿ ಹಣ ದೋಚಲು ಯತ್ನಿಸಿದ ದುಷ್ಕರ್ಮಿಗಳಿಬ್ಬರನ್ನು ಸೆಕ್ಯುರಿಟಿ ಗಾರ್ಡ್, ಸ್ಥಳೀಯರು ಹಿಡಿದು ಥಳಿಸಿ ಇಂದಿರಾನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಿಹಾರ ಮೂಲದ ರಾಮ್ ಕುಮಾರ್ ಗುಪ್ತಾ (28) ಮತ್ತು ಲಕ್ಷ್ಮೀದೇವಿ ನಗರದ ಮ್ಯಾಥ್ಯು (22) ಬಂಧಿತರು. ಸೋಮವಾರ ನಸುಕಿನ 3 ರ ಸುಮಾರಿಗೆ ಪಲ್ಸರ್ ಬೈಕ್ ನಲ್ಲಿ  
ಬಂದ ಆರೋಪಿಗಳು, ಮಾರಕಾಸ್ತ್ರಗಳಿಂದ ಎಟಿಎಂ ಕೇಂದ್ರದ ಬಾಗಿಲು ಒಡೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಘಟಕದೊಳಗಿದ್ದ ಸೆಕ್ಯುರಿಟಿ ಗಾರ್ಡ್ ವೆಂಕಟಕೃಷ್ಣ, ಬಾಗಿಲು ಭದ್ರ ಪಡಿಸಿ ಪೊಲೀಸ್ ನಿಯಂತ್ರ ಣ ಕೊಠಡಿಗೆ ಕರೆ ಮಾಡಿದ್ದಾರೆ.

ಮಾಹಿತಿ ಪಡೆದ ಇಂದಿರಾ ನಗರದ ಗಸ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರನ್ನು ಗಮನಿಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ಕಾರಿನಲ್ಲಿ ಬರುತ್ತಿದ್ದ ಯುವಕರು ಹಾಗೂ ಸೆಕ್ಯುರಿಟಿ ಗಾರ್ಡ್ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಬಂಧಿತರು ಟ್ರಿನಿಟಿ ವೃತ್ತದಲ್ಲಿರುವ ಬಾರ್‍ನಲ್ಲಿ ಕೆಲಸ ಮಾಡುತ್ತಿದ್ದರು. ಬೇರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಪರಿಶೀಲನೆ ನಡೆದಿದೆ ಎಂದು ಇಂದಿರಾನಗರ ಪೊಲೀಸರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT