ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ವಕೀಲ (ಎಸ್ ಪಿಪಿ) ಭವಾನಿ ಸಿಂಗ್ ಅವರ ಮುಂದುವರಿಕೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಹಿಂದೆ ಸರಿದಿದ್ದಾರೆ.
ಎಸ್‍ಪಿಪಿ ಅವರ ನೇಮಕ ಪ್ರಶ್ನಿಸಿ ಡಿಎಂಕೆ ಕಾರ್ಯದರ್ಶಿ ಅನ್ಬಳಗನ್ ಮೇಲ್ಮನವಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ವೇಳೆ ಭವಾನಿ ಸಿಂಗ್ ಪರವಾದ ಮಂಡಿಸಿದ ಹಿರಿಯ ವಕೀಲ ಟಾಮಿ ಸಬಾಸ್ಟಿಯನ್, ಈ ಹಿಂದೆ ಫೆ.2014ರಲ್ಲಿ ಇದೇ ಎಸ್‍ಪಿಪಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ದಾಖಲಾದಾಗ ನ್ಯಾಯಪೀಠ ಅರ್ಜಿಯನ್ನುವಜಾಗೊಳಿಸಿತ್ತು.
ಆದ ಕಾರಣ ಈ ಮೇಲ್ಮನವಿ ಅರ್ಜಿ ವಿಚಾರಣೆ ಈ ಪೀಠ ನಡೆಸುವುದು ಸೂಕ್ತವಲ್ಲ ಎಂದು ವಾದಿಸಿ ಜ್ಞಾಪನ ಪತ್ರ ಸಲ್ಲಿಸಿದರು. ಇದನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ಪ್ರಕಟಿಸಿದರು. ಎಸ್‍ಪಿಪಿ ನೇಮಕ ಪ್ರಶ್ನಿಸಿ ಅನ್ಬಳಗನ್ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆ ನ್ಯಾ.ಆನಂದ್ ಭೈರಾರೆಡ್ಡಿ ಅವರಿದ್ದ ಏಕದಸದಸ್ಯ ಪೀಠ, ಸುಪ್ರೀಂ ಕೋಟ್ರ್ ನಿಂದ ಸ್ಪಷ್ಟೀಕರಣ ಪಡೆಯುವಂತೆ ಸೂಚಿಸಿ ಅರ್ಜಿ ವಿಲೇವಾರಿ ಮಾಡಿತ್ತು