ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಶೆಟ್ಟರ್ ಪ್ರಕರಣ: ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಮಾಜಿ ಮುಖ್ಯಮಂತ್ರಿ ಜಗ ದೀಶ್ ಶೆಟ್ಟರ್ ವಿರುದ್ಧ ಬಿಎಂಟಿಎಸಿ ದಾಖಲಿಸಿದ್ದ ಎಫ್ಐಆರ್ ರದ್ದು ಕೋರಿ...

ಮಾಜಿ ಮುಖ್ಯಮಂತ್ರಿ ಜಗ ದೀಶ್ ಶೆಟ್ಟರ್
Updated On : 7 Feb 2015, 9:50 am

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗ ದೀಶ್ ಶೆಟ್ಟರ್ ವಿರುದ್ಧ ಬಿಎಂಟಿಎಸಿ  ದಾಖಲಿಸಿದ್ದ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಶ್ರೀಗಂಧ ಕಾವಲ್ ಸಮೀಪದ ಗೋಲ್ಡನ್ ವ್ಯಾಲಿ ಎಜುಕೇಷನ್ ಟ್ರಸ್ಟ್‍ಗೆ ನೀಡಲಾಗಿದ್ದ ನಾಲ್ಕು ಎಕರೆ ಜಮೀನನ್ನು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪುತ್ರನಿಗೆ ಮಂಜೂರು
ಮಾಡಿದ ಆರೋಪದ ಮೇಲೆ ಅವರ ವಿರುದ್ದ ಬಿಎಂಟಿಎಸಿ ದೂರು ದಾಖಸಿತ್ತು. ವಿಚಾರಣೆ ನಡೆಸಿದ ನ್ಯಾ.ಆರ್. ಬಿ.ಬೂದಿಹಾಳ್ ಅವರ ಪೀಠ, ತೀರ್ಪು ಕಾಯ್ದಿರಿಸಿದೆ.

ಏನಿದು ವಿವಾದ?

ಶ್ರೀಗಂಧ ಕಾವಲ್ ಬಳಿ ಇದ್ದ 47 ಎಕರೆ 11 ಗುಂಟೆ ಸರ್ಕಾರಿ ಜಮೀನನ್ನು ಕೃಷಿಯಿಂದ ಕೃಷಿಯೇತರ ಎಂದು ಪರಿವರ್ತಿಸಲಾಗಿತ್ತು. ಈ ಪೈಕಿ 10 ಎಕರೆಯನ್ನು ಒಕ್ಕಲಿಗರ
ಸಂಘ ಹಾಗೂ 15 ಎಕರೆಯನ್ನು ಗೋಲ್ಡನ್ ವ್ಯಾಲಿ ಎಜುಕೇಷನ್ ಸಂಸ್ಥೆಗೆ 30 ವರ್ಷ ಗುತ್ತಿಗೆಗೆ ನೀಡಲಾಗಿತ್ತು.ಗುತ್ತಿಗೆ ಅವಧಿ ಮುಗಿದ ಮೇಲೆ ಗೋಲ್ಡನ್ ವ್ಯಾಲಿ ಎಜುಕೇಷನ್ ಟ್ರಸ್ಟ್‍ನ 15 ಎಕರೆ ಜಮೀನಿನಲ್ಲಿ ನಾಲ್ಕು ಎಕರೆಯನ್ನು ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಸುಂದರೇಶ್‍ಗೆ ಮಂಜೂರು ಮಾಡಿದ್ದಾರೆ ಎಂಬ ಆರೋಪ ಸಂಬಂಧ ಬಿಎಂಟಿಎಸಿ  ಎಫ್ಐಆರ್ ದಾಖಲಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments