ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಪ್ರೇಮಿಗಳ ದಿನಾಚರಣೆ ಮಾಡಿದರೆ ಮದುವೆ ಮಾಡಿಸುತ್ತೇವೆ: ಮುತಾಲಿಕ್ ಎಚ್ಚರಿಕೆ

ನಮ್ಮ ದೇಶದ ಸಂಸ್ಕೃತಿಗೆ ವಿರುದ್ಧವಾದ ಪ್ರೇಮಿಗಳ ದಿನವನ್ನು ಆಚರಿಸುವುದು ಕಂಡುಬಂದರೆ ಅವರಿಗೆ...

ಹುಬ್ಬಳ್ಳಿ: ನಮ್ಮ ದೇಶದ ಸಂಸ್ಕೃತಿಗೆ ವಿರುದ್ಧವಾದ ಪ್ರೇಮಿಗಳ ದಿನವನ್ನು ಆಚರಿಸುವುದು ಕಂಡುಬಂದರೆ ಅವರಿಗೆ ತಾಳಿ ಕಟ್ಟಿಸಿ ಮದುವೆ ಮಾಡುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಬುಧವಾರ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಮೋದ್ ಮುತಾಲಿಕ್, ಪ್ರೇಮಿಗಳ ದಿನವನ್ನು 'ಮಾತಾಪಿತ ಪೂಜಾ ದಿನ'ವಾಗಿ ಆಚರಣೆ ಮಾಡುವಂತೆ ಹೇಳಿದರು. ಅಲ್ಲದೆ ನಮ್ಮ ಸಂಸ್ಕೃತಿಗೆ ವಿರುದ್ಧವಾದ ಪ್ರೇಮಿಗಳ ದಿನಾಚರಣೆಯನ್ನು ಆಚರಣೆ ಮಾಡಬಾರದು, ಒಂದು ವೇಳೆ ಪ್ರೇಮಿಗಳ ದಿನ ದಂದು ಸ್ವೇಚ್ಛಾಚಾರದಲ್ಲಿ ತೊಡಗಿರುವವರು ಕಂಡು ಬಂದರೆ ಶ್ರೀರಾಮ ಸೇನೆ ಅಂತಹವರಿಗೆ ಮದುವೆ ಮಾಡಿಸುತ್ತದೆ'' ಎಂದು ಮುತಾಲಿಕ್ ಎಚ್ಚರಿಕೆ ನೀಡಿದರು.

ಇನ್ನು ಈಗಾಗಲೇ ಛತ್ತೀಸ್‌ಗಢ್‌ ಸರ್ಕಾರ ಫೆ.14ನ್ನು 'ಮಾತಾಪಿತೃ ದಿನ'ವಾಗಿ ಆಚರಣೆ ಮಾಡಬೇಕೆಂದು ಆದೇಶ ಹೊರಡಿಸಿದ್ದು, ಎಲ್ಲ ಸರ್ಕಾರಿ ಶಾಲೆಗಳಲ್ಲಿ ಈ ದಿನದಂದು  ಮಕ್ಕಳು ಪೋಷಕರಿಗೆ ಪೂಜೆ ಮಾಡಬೇಕು ಎಂದು ಸೂಚನೆ ನೀಡಿದೆ. ಮತ್ತೊಂದೆಡೆ ಹಿಂದೂ ಮಹಾಸಭಾದ ರಾಷ್ಟ್ರಾಧ್ಯಕ್ಷ ಚಂದ್ರ ಪ್ರಕಾಶ್ ಕೌಶಿಕ್ ಅವರು ಕೂಡ ಪ್ರೇಮಿಗಳ ದಿನಾಚರಣೆ ಮಾಡಿದರೆ ಮದುವೆ ಮಾಡಿಸುತ್ತೇವೆ ಎಂದು ಈಗಾಗಲೇ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ