ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

ರಾಜ್ಯ ಕಬ್ಬು ಬೆಳೆಗಾರರು ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನೂರಾರು ರೈತರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡು...

ಬೆಂಗಳೂರು: ರಾಜ್ಯ ಕಬ್ಬು ಬೆಳೆಗಾರರು ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನೂರಾರು ರೈತರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಂತಕುಮಾರ್, ಕಬ್ಬು ಬೆಳೆಗಾರರ ಬಾಕಿಯನ್ನು ಜನವರಿ 30ರ ಒಳಗಾಗಿ ಪಾವತಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಇದನ್ನು ಸಕ್ಕರೆ ಕಾರ್ಖಾನೆಗಳು ಹುಸಿಗೊಳಿಸಿವೆ.

ಆದ್ದರಿಂದ ಕಾರ್ಖಾನೆಗಳ ವರ್ತನೆ ವಿರೋಧಿಸಿ ರೈತರು ಸಾಕಷ್ಟು ಬಾರಿ ಪ್ರತಿಭಟಿಸಿದ್ದಾರೆ. ಆದರೂ ಸರ್ಕಾರ ಮಧ್ಯಪ್ರವೇಶ ಮಾಡಿ ರೈತರಿಗೆ ಬಾಕಿ ಸಿಗುವಂತೆ ಮಾಡುತ್ತಿಲ್ಲ ಎಂದು ದೂರಿದರು. ನಂತರ ಸಂಘದ ಇತರ ಮುಖಂಡರೂ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರವನ್ನು ಹಲವು ರೀತಿಯಲ್ಲಿ ಟೀಕಿಸಿದರು.

ದಿನವಿಡೀ ಪ್ರತಿಭಟಿಸಿದರೂ ಸರ್ಕಾರದಿಂದ ಯಾವುದೇ ಪ್ರತಿನಿಧಿಗಳು ಬಂದು ರೈತರು ಸಮಸ್ಯೆಗಳನ್ನು ಆಲಿಸಲಿಲ್ಲ. ಮಂಗಳವಾರ ಮುಂದುವರಿದ ಧರಣಿ ವೇಳೆ ಮಾತನಾಡಿದ ಕುರುಬೂರು ಶಾಂತಕುಮಾರ್, ಹೋರಾಟ ನಿರತ ರೈತರ ಕಬ್ಬನ್ನು ಖರೀದಿಸುವುದಿಲ್ಲ ಎಂದು ಕಾರ್ಖಾನೆಗಳು ಬೆದರಿಕೆ ಹಾಕುತ್ತಿವೆ.

ಕೆಲವು ಕಾರ್ಖಾನೆಗಳ ಮುಖಂಡರು ಭೂಗತ ದೊರೆಗಳಂತೆ ವರ್ತಿಸುತ್ತಿದ್ದಾರೆ. ಈ ಮಧ್ಯೆ ಸರ್ಕಾರದ ದ್ವಂದ್ವ ನಿಲುವು ರೈತರನ್ನು ಕಷ್ಟಕ್ಕೆ ನೂಕಿದೆ. ಆದ್ದರಿಂದ ರೈತರು ಅನಿವಾರ್ಯವಾಗಿ ಹೋರಾಟದ ಹಾದಿಯನ್ನು ತುಳಿದಿದ್ದಾರೆ. ಸರ್ಕಾರ ಈಗಲೇ ಹಳೇ ವರಸೆಯನ್ನೇ ಮುಂದುವರಿಸಿದರೆ ಕಬ್ಬು ಬೆಳೆಗಾರರು ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ನಡೆಸಬೇಕಾತ್ತದೆ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ