ಬಳ್ಳಾರಿ: ಜಿಂದಾಲ್ ಕಂಪನಿಗೆ ಸೇರಿದ ಲಾರಿಯೊಂದು ಪಲ್ಪಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ.
ಜಿಂದಾಲ್ ಕಂಪನಿಯಿಂದ ಸ್ಪೀಲ್ ಸಾಗಿಸುತ್ತಿದ್ದ ವೇಳೆ ಬಳ್ಳಾರಿಯ ಸಂಡೂರು ತಾಲೂಕಿನ ಸುಲ್ತಾನ್ಪುರ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಇದರಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರಿಗೆ ಗಾಯಗಳಾಗಿವೆ.
ಮೃತ ಕಾರ್ಮಿಕರನ್ನು ಬಿಹಾರ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತೋರಣ್ಗಲ್ ಬಳಿಯ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಡತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.