ಜಿಲ್ಲಾ ಸುದ್ದಿ

126 ಪ್ರಕರಣ ಪತ್ತೆ, 99 ಆರೋಪಿಗಳ ಸೆರೆ

ನಗರದ ಪಶ್ಚಿಮ ವಿಭಾಗ ಪೊಲೀಸರು 126 ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ 99 ಆರೋಪಿಗಳನ್ನು ಬಂಧಿಸಿ ರು. 1.43 ಕೋಟಿ ಮೌಲ್ಯದ...

ಬೆಂಗಳೂರು: ನಗರದ ಪಶ್ಚಿಮ ವಿಭಾಗ ಪೊಲೀಸರು 126 ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ 99 ಆರೋಪಿಗಳನ್ನು ಬಂಧಿಸಿ ರು. 1.43 ಕೋಟಿ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಒಂದೂವರೆ ತಿಂಗಳಲ್ಲಿ ದಕ್ಷಿಣ ವಿಭಾಗದಲ್ಲಿ ದಾಖಲಾಗಿದ್ದ 4 ದರೋಡೆ, 8 ಸುಲಿಗೆ, 7 ಸರ ಅಪಹರಣ, 28 ಕನ್ನ ಕಳವು, 17 ಮನೆ ಕಳವು, 30 ದ್ವಿಚಕ್ರ ವಾಹನ ಕಳವು ಸೇರಿದಂತೆ ದಾಖಲಾಗಿದ್ದ ಹಲವು ಪ್ರಕರಣಗಳನ್ನು ಬೇಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಆರೋಪಿಗಳನ್ನು ಪತ್ತೆ ಮಾಡಲು ಶ್ರಮಿಸಿದ ವಿಜಯನಗರ, ಮಾಗಡಿ ರಸ್ತೆ, ಕಾಮಾಕ್ಷಿಪಾಳ್ಯ, ಬಸವೇಶ್ವರ ನಗರ,  ಕೆ.ಪಿ.ಅಗ್ರಹಾರ, ಕೆಂಗೇರಿ, ಬ್ಯಾಟರಾಯನಪುರ, ಜ್ಞಾನಭಾರತಿ, ಚಂದ್ರಲೇಔಟ್, ರಾಜ ರಾಜೇಶ್ವರಿನಗರ, ಚಿಕ್ಕಪೇಟೆ,  ಸಿಟಿ ಮಾರುಕಟ್ಟೆ, ಕಲಾಸಿಪಾಳ್ಯ, ಕಾಟನ್‍ಪೇಟೆ ಠಾಣೆ ಪೊಲೀಸರನ್ನು ಶ್ಲಾಘಿಸಿದರು.

ವಿಜಯನಗರ ಪೊಲೀಸರು ಕನ್ನಕಳವು ಮಾಡುತ್ತಿದ್ದ ನಾಗರಾಜ ಹಾಗೂ ಆತನ ಸಹಚರರನ್ನು ಬಂಧಿಸಿ ರು. 33,75 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel