ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ನಗರಕ್ಕೆ ನಾಳೆ ಮೋದಿ: ಭಾರಿ ಭದ್ರತೆ

ಏರೋ ಇಂಡಿಯಾ' ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದ್ದು..

ಬೆಂಗಳೂರು: ಯಲಂಹಕ ವಾಯುನೆಯಲ್ಲಿ ಫೆ. 18ರಿಂದ ಆರಂಭವಾಗಲಿರುವ `ಏರೋ ಇಂಡಿಯಾ' ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದ್ದು, ಅವರು ಸಂಚರಿಸುವ ಮಾರ್ಗಗಳಲ್ಲಿ ಹದ್ದಿನ ಕಣ್ಣಿಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ತಿಳಿಸಿದರು.

ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಅಂದು ಬೆಳಗ್ಗೆ ಮೋದಿ ದೆಹಲಿಯಿಂದ ನೇರವಾಗಿ ಏರ್‍ಶೋ ನಡೆಯಲಿರುವ ಯಲಹಂಕ ವಾಯುನೆಲೆಗೆ ಬಂದಿಳಿಯಲಿದ್ದಾರೆ. ಏರ್‍ಶೋಗೆ ಚಾಲನೆ ನೀಡಿದ ನಂತರ ಹೆಬ್ಬಾಳದಲ್ಲಿರುವ ಜಿಕೆವಿಕೆ, ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಆಫ್ ಸೈನ್ಸ್ ಹಾಗೂ ನಿಮ್ಹಾನ್ಸ್ ಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ಮತ್ತೆ ಎಚ್‍ಎಎಲ್‍ಗೆ ತೆರಳಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ವೇಳೆ ಯಾವುದೇ ಅನಾಹುತ ಸಂಭವಿಸದಂತೆ 1 ಸಾವಿರ ಹೋಂಗಾರ್ಡ್ಸ್, ಹೊರಜಿಲ್ಲೆಗಳಿಂದ 1300 ಸಿಬ್ಬಂದಿ, ಉಳಿದಂತೆ ಕೆಎಸ್ ಆರ್‍ಪಿ, ಸಿಎಆರ್, ಸೆಂಟ್ರಲ್ ಪೊಲೀಸ್ ಗುಪ್ತಚರ ದಳದ ಹಾಗೂ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಉಳಿದಂತೆ ಫೆ.18 ರಿಂದ 22ರವರೆಗೆ ನಡೆಯಲಿರುವ ವೈಮಾನಿಕ ಪ್ರದರ್ಶನಕ್ಕೆ ಅಗತ್ಯ ಭದ್ರತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮಂಗಳಯಾನ!
ವಿಜ್ಞಾನ ಲೋಕದಲ್ಲಿ ಭಾರತದ ಖ್ಯಾತಿಯನ್ನು ಉತ್ತುಂಗಕ್ಕೆ ಏರಿಸಿರುವ ಮಂಗಳಯಾನದ ನಾನಾ ಮುಖಗಳು ಇಸ್ರೋ ಹಾಗೂ ಎಚ್‍ಎಎಲ್ ಮಳಿಗೆಗಳಲ್ಲಿ ಕಾಣಿಸಲಿದೆ. ಜಿಎಸ್ ಎಲ್‍ವಿಯ 35 ಅಡಿಯ ಪ್ರತಿಕೃತಿ ಜತೆಗೆ ಮಂಗಳಯಾನದ ಸಂಪೂರ್ಣ ವಿವರವನ್ನು ಇಸ್ರೋ ನೀಡುತ್ತಿದೆ. ಇನ್ನು ಎಚ್ ಎಎಲ್ ಸಂಸ್ಥೆಯು ಮಂಗಳ ಗ್ರಹದ ಪರ್ಯಾವರಣವನ್ನು ಮರು ಸೃಷ್ಟಿ ಮಾಡಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದೆ. 1200 ಚ ಮೀಟರ್ ಜಾಗದಲ್ಲಿ ಮಂಗಳ ಗ್ರಹ ಹೋಲುವಂತಹ ವಾತಾವರಣ ಸೃಷ್ಟಿಸಲಾಗಿದೆ. ಭಾರತದ ಮಟ್ಟಿಗೆ ಪ್ರತಿ ವರ್ಷವೂ ಅಗ್ನಿ, ಪ್ರಥ್ವಿ, ತೇಜಸ್ ಹಾಗೂ ಬ್ರಹ್ಮೋಸ್ ಪ್ರಮುಖ ಆಕರ್ಷಣೆಯಾಗಿರುತ್ತಿತ್ತು. ಆದರೆ ಈ ಬಾರಿ ಮಂಗಳಯಾನವು ಏರೋ ಇಂಡಿಯಾ ಪ್ರದರ್ಶನದಲ್ಲಿ ಭಾರತದ ಮಟ್ಟಿಗೆ ದೊಡ್ಡ ಆಕರ್ಷಣೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT