ಬೆಂಗಳೂರು: ಎಐಎಂಐಎ ಮುಖಂಡ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ನಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿರ್ಬಂಧ ಹೇರಿರುವುದನ್ನು ಗೃಹ ಸಚಿವ ಜಾರ್ಜ್ ಸಮರ್ಥಿಸಿಕೊಂಡಿದ್ದಾರೆ.
ಶಾಂತಿ, ಸುವ್ಯವಸ್ಥೆಯ ಸಲುವಾಗಿ ಅಸಾದುದ್ದೀನ್ ಒವೈಸಿ ನಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿರ್ಬಂಧ ಹೇರಿದೆ. ಆದರೆ, ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ನಗರ ಪೊಲೀಸರು ತೆಗೆದುಕೊಂಡ ಕ್ರಮದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ.
ಶಿವಾಜಿನಗರದ ಛೋಟಾ ಮೈದಾನದ್ಲಲಿ ಫೆ.21ರಂದು ನಡೆಯಲಿರುವ ಎಂಐಎಂ ಸಮಾವೇಶದಲ್ಲಿ ಭಾಗವಹಿಸಲು ಹೈದ್ರಾಬಾದ್ ಸಂಸದ ಅಸಾದುದ್ದೀನ್ ಒವೈಸಿಗೆ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಆದೇಶಿಸಿದ್ದರು.
ಫೆ.9ರಿಂದ 25ವರೆಗೆ ಅಸಾದುದ್ದೀನ್ ಒವೈಸಿ ಬೆಂಗಳೂರು ಪ್ರವೇಶಿಸುವಂತಿಲ್ಲ. ಪ್ರಚೋದನಕಾರಿ ಭಾಷಣ ಹಿನ್ನೆಲೆ ಹೊಂದಿರುವ ಒವೈಸಿ ವಿರುದ್ಧ ಹೈದ್ರಾದಾಬ್ ಮತ್ತು ಮಹಾರಾಷ್ಟ್ರದಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಪ್ರಚೋದನಾಕಾರಿ ಭಾಷಣ ಹಾಗೂ ಹೇಳಿಕೆಯಿಂದಾಗಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ನಿಷೇಧ ವಿಧಿಸಲಾಗಿದೆ. ಇಂದು ಮಧ್ಯಾಹ್ನ 3ರಿಂದ 6ರವರೆಗೆ ಎಂಐಎಂ ಪಕ್ಷದ ಸಮಾವೇಶ ನಡೆಸಲು ಅನುಮತಿ ನೀಡಲಾಗಿದೆ.
ವಿಡಿಯೋ, ಆಡಿಯೋ ಸೇರಿದಂತೆ ಎಲ್ಲ ರೀತಿಯ ಭಾಷಣ ಪ್ರಸಾರ ನಿರ್ಬಂಧಿಸಲಾಗಿದೆ. ಷರತ್ತು ಉಲ್ಲಂಘಿಸಿದರೆ ಆಯೋಜಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.