ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪೊಲೀಸರ ಬೆದರಿಸಲು ಬೆಂಕಿ ಹಚ್ಚಿಕೊಂಡ ಭೂಪ

ಪೊಲೀಸರು ವಶಪಡಿಸಿಕೊಂಡಿದ್ದ ತನ್ನ ಬೈಕ್ ಅನ್ನು ವಾಪಸ್ ನೀಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೇಲೆ ಪೆಟ್ರೋಲ್...

ಧಾರವಾಡ: ಪೊಲೀಸರು ವಶಪಡಿಸಿಕೊಂಡಿದ್ದ ತನ್ನ ಬೈಕ್ ಅನ್ನು ವಾಪಸ್ ನೀಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ.

ರಸ್ತೆ ನಿಯಮ ಉಲ್ಲಂಘನೆ ಮೇರೆಗೆ ಧಾರವಾಡ ಸಂಚಾರಿ ಠಾಣೆ ಪೊಲೀಸರು ನಿನ್ನೆ ಸಾಧನೆಕೆರೆ ಲೇಔಟ್ ನಿವಾಸಿ ತಾರಕೇಶ್ವರ ಸುಣಗಾರ್ ಎಂಬಾತನ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದರು. ನಿನ್ನೆ ರಾತ್ರಿ ಸಂಚಾರಿ ಪೊಲೀಸ್ ಠಾಣೆಗೆ ಹೋದ ತಾರಕೇಶ್ವರ ತನ್ನ ವಾಹನವನ್ನು ವಾಪಸ್ ನೀಡುವಂತೆ ಕೇಳಿದ್ದಾನೆ. ಈ ವೇಳೆ ಪೊಲೀಸರು ಈಗ ರಾತ್ರಿಯಾಗಿದ್ದು ಬೆಳಗ್ಗೆ ಬಾ ಆಗ ಪ್ರಕರಣದ ಬಗ್ಗೆ ವಿಚಾರಿಸುತ್ತೇವೆ ಎಂದು ಹೇಳಿದ್ದಾರೆ. ಪೊಲೀಸರ ಮಾತಿಗೆ ಬಗ್ಗದ ತಾರಕೇಶ್ವರ ಅವರೊಂದಿಗೆ ಮಾತಿನ ಚಕಮಕಿಗೆ ಇಳಿದಿದ್ದಾನೆ.

ಈ ವೇಳೆ ಪೊಲೀಸರನ್ನು ಬೆದರಿಸಲು ತಾರಕೇಶ್ವರ ತನ್ನ ಬಳಿ ಇದ್ದ ಪೆಟ್ರೋಲ್ ಕ್ಯಾನ್ ತೆರೆದು ಮೇಲೆ ಸುರಿದುಕೊಂಡಿದ್ದಾನೆ. ಅಲ್ಲದೆ ನೋಡ ನೋಡುತ್ತಿದ್ದಂತೆಯೇ ಬೆಂಕಿ ಹಚ್ಚಿಕೊಂಡಿದ್ದಾನೆ. ಇವಿಷ್ಟು ಪ್ರಹಸನವನ್ನು ನೋಡುತ್ತಿದ್ದ ಸ್ಥಳೀಯರು ಕೂಡಲೇ ತಾರಕೇಶ್ವರನ ಮೈ ಮೇಲಿನ ಬೆಂಕಿಯನ್ನು ನಂದಿಸಿ, ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ತಾರಕೇಶ್ವರನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮೈ ಮೇಲೆ ಸುಟ್ಟಗಾಯಗಳಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!