ಜಿಲ್ಲಾ ಸುದ್ದಿ

ಮತ್ತೆ ಸರಗಳ್ಳರ ಹಾವಳಿ

ನಗರದಲ್ಲಿ ಸರಗಳ್ಳರ ಹಾವಳಿ ಮತ್ತೆ ಆರಂಭವಾಗಿದೆ. ಚಂದ್ರಾಲೇಔಟ್ ಮತ್ತು ಹನುಮಂತನಗರದಲ್ಲಿ ಭಾನುವಾರ ನಡೆದ ಪ್ರತ್ಯೇಕ ಪ್ರಕರಣದಲ್ಲಿ ಬೈಕ್ ನಲ್ಲಿ ಬಂದ...

ಬೆಂಗಳೂರು: ನಗರದಲ್ಲಿ ಸರಗಳ್ಳರ ಹಾವಳಿ ಮತ್ತೆ ಆರಂಭವಾಗಿದೆ. ಚಂದ್ರಾಲೇಔಟ್ ಮತ್ತು ಹನುಮಂತನಗರದಲ್ಲಿ ಭಾನುವಾರ ನಡೆದ ಪ್ರತ್ಯೇಕ ಪ್ರಕರಣದಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಇಬ್ಬರು ಮಹಿಳೆಯರ ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ.

ಚಂದ್ರಾಲೇಔಟ್ ನಿಸರ್ಗ ಲೇ ಔಟ್ ನಲ್ಲಿ ದುಷ್ಕರ್ಮಿಗಳು ಶಾಂತಮ್ಮ(57) ಎಂಬುವವರ 40 ಗ್ರಾಂ ಚಿನ್ನದ ಸರ ದೋಚಿದ್ದಾರೆ. ನಿಸರ್ಗ ಲೈಔಟ್ ನಿವಾಸಿಯಾದ ಅವರು, ಸಂಬಂಧಿಯೊಬ್ಬರ ಅಂತ್ಯಕ್ರಿಯೆಗಾಗಿ ಶಿವಗಂಗೆಗೆ ಹೋಗಿದ್ದರು. ಭಾನುವಾರ ಮಧ್ಯಾಹ್ನ ಹಿಂತಿರುಗಿದ ಅವರು, ಆಟೋದಲ್ಲಿ ಬಂದು ಮನೆ ಸಮೀಪ ನಡೆದು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿ ಸರ ದೋಚಿದ್ದಾನೆ. ಆಗ ಸಹಾಯಕ್ಕಾಗಿ ಕೂಗಿಕೊಂಡ ಶಾಂತಮ್ಮ, ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಹೆದರಿದ ಆರೋಪಿ ಕೈಗೆ ಸಿಕ್ಕ 40 ಗ್ರಾಂ ಸರ ದೋಚಿದ್ದು, ಸ್ವಲ್ಪ ದೂರದಲ್ಲಿ ನಿಂತಿದ್ದ ಸ್ನೇಹಿತನ ಜತೆ ಬೈಕ್ ನಲ್ಲಿ ಪರಾರಿಯಾಗಿದ್ದಾನೆ. 10 ಗ್ರಾಂ ಸರ ಮಾತ್ರ ಶಾಂತಮ್ಮನ ಕೈನಲ್ಲೇ ಉಳಿದುಕೊಂಡಿದೆ. ಈ ಸಂಬಂಧ ಚಂದ್ರಾಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹನುಮಂತನಗರ 13ನೇ ಅಡ್ಡರಸ್ತೆ ನಿವಾಸಿ ಜಯಲಕ್ಷ್ಮಿ(60) ಅವರ ಸರವನ್ನೂ ದುಷ್ಕರ್ಮಿಗಳು ದೋಚಿದ್ದಾರೆ. ಔಷಧ ತರಲೆಂದು ಬೆಳಗ್ಗೆ ಶ್ರೀನಗರಕ್ಕೆ ಹೋಗುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿ ಗಳು, 90 ಗ್ರಾಂ ಸರ ದೋಚಿದ್ದಾರೆ. ಬೈಕ್ ಸವಾರ ಹೆಲ್ಮೆಟ್ ಧರಿಸಿದ್ದ. ಹಿಂದೆ ಕುಳಿತಿದ್ದ ವ್ಯಕ್ತಿ ಮಂಕಿ ಕ್ಯಾಪ್ ಹಾಕಿದ್ದ ಎಂದು ಜಯಲಕ್ಷ್ಮೀ ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT