ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಹೌಸ್‍ಕೀಪಿಂಗ್ ಉದ್ಯೋಗಿ ನಿಗೂಢ ಸಾವು

ಕೆಂಗೇರಿ ಸಮೀಪದ ಬೀಡಿ ಕಾರ್ಮಿಕರ ಕಾಲೋನಿ ಬಳಿ ಖಾಸಗಿ ಕಂಪನಿ ಆವರಣದಲ್ಲಿ ಹೌಸ್ ಕೀಪಿಂಗ್ ಉದ್ಯೋಗಿಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದಾರೆ...

ಬೆಂಗಳೂರು: ಕೆಂಗೇರಿ ಸಮೀಪದ ಬೀಡಿ ಕಾರ್ಮಿಕರ ಕಾಲೋನಿ ಬಳಿ ಖಾಸಗಿ ಕಂಪನಿ ಆವರಣದಲ್ಲಿ ಹೌಸ್ ಕೀಪಿಂಗ್ ಉದ್ಯೋಗಿಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದಾರೆ.

ಕೆಂಗೇರಿ 7ನೇ ಮುಖ್ಯರಸ್ತೆ ನಿವಾಸಿ ವೆಂಕಟರಾಜು (47) ಮೃತರು. ಇವರು ಸಿಡಿಡಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಅಸ್ವಸ್ಥನಾಗಿ ಬಿದ್ದಿದ್ದ ಅವರನ್ನು ಕಂಡ ಕಂಪನಿ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ ವೆಂಕಟರಾಜು ಅವರ ಸಹೋದ್ಯೋಗಿಗಳೇ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪಸಿ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸಿದರು.

ಆರೋಪಿಗಳನ್ನು ಬಂಧಿಸುವವರೆಗೆ ಸ್ಥಳದಿಂದ ಮೃತದೇಹ ತೆಗೆಯಲು ಬಿಡುವುದಿಲ್ಲ ಎಂದು ಪ್ರತಿಭಟನಕಾರರು ಪಟ್ಟು ಹಿಡಿದ್ದರು. ನಂತರ ಸ್ಥಳಕ್ಕೆ ಧಾವಿಸಿದ ಪಶ್ಚಿಮ ವಿಭಾಗ ಡಿಸಿಪಿ ಲಾಬುರಾಮ್ ಹಾಗೂ ಹಿರಿಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಭರವಸೆ ನೀಡಿದರು. ಬಳಿಕ ಸಂಬಂಧಿಕರು ಪ್ರತಿಭಟನೆ ಹಿಂಪಡೆದರು. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಇದು ಕೊಲೆಯೋ ಆತ್ಮಹತ್ಯೆಯೋ ಎಂಬುದು ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಹೋದ್ಯೋಗಿ ಜತೆ ಜಗಳ: ವೆಂಕಟರಾಜು

ಅವರು ಬೆ. 7.30ರ ವೇಳೆಗೆ ಕಂಪನಿ ಬಳಿ ಬಂದಿದ್ದರು. ಈ ವೇಳೆ ಅಲ್ಲಿನ ಕೆಲಸ ಮಾಡುವ ಸುಶೀಲಮ್ಮ  ಎಂಬಾಕೆಯ ಜತೆ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದ ವೆಂಕರಾಜು ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಅಸ್ವಸ್ಥಗೊಂಡ ಸುಶೀಲಮ್ಮರನ್ನು ಸಹೋದ್ಯೋಗಿಗಳಾದ ಮಂಗಳಮ್ಮ, ಜಯಲಕ್ಷ್ಮಮ್ಮ ಎಂಬುವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಹಿಳೆ ಮೇಲೆ ಹಲ್ಲೆ ಮಾಡಿದ್ದರಿಂದ ಭೀತಿಗೆ ಒಳಗಾದ ವೆಂಕಟರಾಜು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಗಿ ಸೆಕ್ಯುರಿಟಿ ಗಾರ್ಡ್ ಹಾಗೂ ಸಿಬ್ಬಂದಿ ಹೇಳಿದ್ದಾರೆ. ಆದರೆ, ಉದ್ದೇಶಪೂರ್ವಕವಾಗಿ ಹತ್ಯೆ ಮಾಡಲಾಗಿದೆ ಎಂದು ಸಂಬಂಧಿಕರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT