ಬಸವನಬಾಗೇವಾಡಿ(ವಿಜಯಪುರ): ಇಲ್ಲಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಟ್ರ್ಯಾಕ್ಟರ್‌ವೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ದುರ್ಮರಣ ಹೊಂದಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಗೋಳಸಂಗಿ ಬಳಿಯ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.