ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕಿಡಿಗೇಡಿಗಳಿಂದ ಚರ್ಚ್ ಮೇಲೆ ದಾಳಿ

ನಗರದಲ್ಲಿ ಮತ್ತೆ ಚರ್ಚ್ ಮೇಲೆ ದಾಳಿ ನಡೆದಿದ್ದು, ಮಂಗಳೂರಿನ ಕೋಟೆಗಾರು ಬಳಿಯ ಚರ್ಚ್ ಹೊರಾಂಗಣದಲ್ಲಿರುವ ಮರ್ಸಿಯಮ್ಮ ಮಾತೆ ಪಾರ್ಥನಾ ಮಂದಿರದ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ...

ಮಂಗಳೂರು: ನಗರದಲ್ಲಿ ಮತ್ತೆ ಚರ್ಚ್ ಮೇಲೆ ದಾಳಿ ನಡೆದಿದ್ದು, ಮಂಗಳೂರಿನ ಕೋಟೆಗಾರು ಬಳಿಯ ಚರ್ಚ್ ಹೊರಾಂಗಣದಲ್ಲಿರುವ ಮರ್ಸಿಯಮ್ಮ ಮಾತೆ ಪಾರ್ಥನಾ ಮಂದಿರದ ಮೇಲೆ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ.

ದುಷ್ಕರ್ಮಿಗಳ ಕಲ್ಲು ತೂರಾಟದಿಂದ ಮಂದಿರದ ಕಿಟಕಿ ಗಾಜುಗಳು ಒಡೆದು ಹೋಗಿದ್ದು, ಸ್ಥಳದಲ್ಲಿ ಮದ್ಯದ ಬಾಟಲಿ ಹಾಗೂ ಸಿಗರೇಟ್‌ಗಳು ದೊರೆತಿರುವುದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದ್ ಅವರು, ಕೆಲವು ಸಮಾಜಘಾತುಕ ಶಕ್ತಿಗಳು ಜನರಲ್ಲಿ ಆತಂಕ ಸೃಷ್ಟಿಸಿ, ಶಾಂತಿಯನ್ನು ಕದಡುವ ಸಲುವಾಗಿ ಈ ರೀತಿ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇಂತಹ ಕೃತ್ಯಗಳಿಂದ ಜನರು ಹೆದರಬಾರದು ಎಂದು ಅಭಯವನ್ನು ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಸಿಗರೇಟು ಮದ್ಯಪಾನದ ಬಾಟಲಿಗಳನ್ನು ನೋಡಿದರೆ ಈ ಕೃತ್ಯವನ್ನು ಸಣ್ಣ ಗುಂಪು ಮಾಡಿರುವುದಾಗಿ ತಿಳಿದುಬಂದಿದೆ. ಆರೋಪಿಗಳನ್ನು ಹಿಡಿಯಲು ಸಾರ್ವಜನಿಕರು ಪೊಲೀಸರೊಂದಿಗೆ ಕೈಜೋಡಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT