ಗೃಹ ಸಚಿವ ಜಾರ್ಜ್ 
ಜಿಲ್ಲಾ ಸುದ್ದಿ

ರಾಜ್ಯ ನೂತನ ಪೊಲೀಸ್ ಮಹಾನಿರ್ದೇಶಕ ಸ್ಥಾನಕ್ಕೆ ನಾಲ್ವರ ಹೆಸರು ಶಿಫಾರಸು

ಹಾಲಿ ಪೊಲೀಸ್ ಮಹಾನಿರ್ದೇಶಕ ಲಾಲ್ ರುಕಾಮ್ ಪಚಾವೋ ಅವರ ಅಧಿಕಾರವಧಿ ನಾಳೆ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅವರ ಸ್ಥಾನಕ್ಕೆ ನಾಲ್ವರು...

ಬೆಂಗಳೂರು: ಹಾಲಿ ಪೊಲೀಸ್ ಮಹಾನಿರ್ದೇಶಕ ಲಾಲ್ ರುಕಾಮ್ ಪಚಾವೋ ಅವರ ಅಧಿಕಾರವಧಿ ನಾಳೆ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅವರ ಸ್ಥಾನಕ್ಕೆ ನಾಲ್ವರು ಅಧಿಕಾರಿಗಳ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ ಎಂದು ಗೃಹ ಸಚಿವ ಜಾರ್ಜ್ ಶುಕ್ರವಾರ ಹೇಳಿದ್ದಾರೆ.

ಉನ್ನತಾಧಿಕಾರ ಸಮಿತಿ ಸಭೆ ಬಳಿಕ ಮಾತನಾಡಿದ ಗೃಹ ಸಚಿವರು, ಓಂ ಪ್ರಕಾಶ್, ಸುಶಾಂತ್ ಮಹಾಪಾತ್ರ, ಆರ್.ಕೆ ದತ್ತಾ ಮತ್ತು ಬಿಪಿನ್ ಗೋಪಾಲಕೃಷ್ಣ ಅವರ ಹೆಸರುಗಳನ್ನು ಶಿಫಾರಸ್ಸು ಮಾಡಿದ್ದೇವೆ.

ಈ ನಾಲ್ವರ ಹೆಸರಿನ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಲಾಗುವುದು. ಈ ಪೈಕಿ ಒಬ್ಬರನ್ನ ಡಿಜಿ-ಐಜಿಪಿ ಸ್ಥಾನಕ್ಕೆ ನೇಮಕ ಮಾಡಲಾಗುವುದು.

ಸೂಕ್ತರನ್ನ ಸಿಎಂ ಸಿದ್ದರಾಮಯ್ಯ ನೇಮಕ ಮಾಡುತ್ತಾರೆ. ನೇಮಕ ಮಾಡುವ ಪರಮಾಧಿಕಾರ ಮುಖ್ಯಮಂತ್ರಿಗಿದೆ. ನೂತನ ಡಿಜಿ-ಐಜಿಪಿ ನಾಳೆ ಅಧಿಕಾರ ಸ್ವೀಕರಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಅಗ್ನಿಶಾಮಕ ಮತ್ತು ಗೃಹ ರಕ್ಷಕ ದಳದ ಡಿಜಿಪಿಯಾಗಿದ್ದ ಓಂಪ್ರಕಾಶ್ ಅವರು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿ ಕಂಡು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!