ಜಿಲ್ಲಾ ಸುದ್ದಿ

ಅತ್ಯಾಚಾರಿಗೆ ಸಾರ್ವಜನಿಕರ ಗೂಸಾ

ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಸಾರ್ವಜನಿಕರೇ ಹಿಡಿದು...

ಬೆಂಗಳೂರು: ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಸಾರ್ವಜನಿಕರೇ ಹಿಡಿದು ಥಳಿಸಿರುವ ಘಟನೆ ಎಚ್‌ಎಎಲ್ ವಿಮಾನ ನಿಲ್ದಾಣ ಬಳಿ ಸಂಭವಿಸಿದೆ.

ಹಳೇ ವಿಮಾನ ನಿಲ್ದಾಣ ರಸ್ತೆ ನಿವಾಸಿ ಕಿಶೋರ್(20) ಬಂಧಿತ. ಕುಡಿಯುವ ನೀರಿನ ಕ್ಯಾನ್ ಪೂರೈಕೆ ಮಾಡುತ್ತಿದ್ದ ಕಿಶೋರ್, ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆ ಸಮೀಪ ಚಿಂದಿ ಆಯುತ್ತಿದ್ದ 40 ವರ್ಷದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಕಿರುಚಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಕಿಶೋರ್‌ನ ಬೆನ್ನಟ್ಟಿ ಹಿಡಿದು ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆ ತಮಿಳುನಾಡಿನವರಾಗಿದ್ದು 15 ದಿನಗಳ ಹಿಂದಷ್ಟೇ ನಗರಕ್ಕೆ ಆಗಮಿಸಿದ್ದಾರೆ.

ಘಟನೆ ಸಂಬಂಧ ಆರೋಪಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!