ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ 
ಜಿಲ್ಲಾ ಸುದ್ದಿ

ಇವತ್ತು ಕಿಸ್ ಡೇ, ನಾಳೆ ಸ್ಲೀಪಿಂಗ್ ಡೇ

ಈ ಬಗ್ಗೆ ಕ್ರಮ ತಗೊಳ್ಳಿ ಅಂದ್ರೆ ಮುಖ್ಯಮಂತ್ರಿ, ಗೃಹ ಸಚಿವ ಜಾರ್ಜ್ ಕಾನೂನು ಕ್ರಮ ತಗೋತೀವಿ ಅಂತಾರೆ...

ಶಿವಮೊಗ್ಗ: ಇವತ್ತು ಕಿಸ್ ಡೇ ಮಾಡ್ತೀವಿ ಅಂತಾರೆ. ಮುಂದೆ ಸ್ಲೀಪಿಂಗ್ ಡೇ ಮಾಡ್ತೀವಿ ಅಂತಾರೆ. ಅದನ್ನೆಲ್ಲಾ ನೋಡಿಕೊಂಡು ಸುಮ್ಮನಿರಲು ಸಾಧ್ಯವೇ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದರು.

ಈ ಬಗ್ಗೆ ಕ್ರಮ ತಗೊಳ್ಳಿ ಅಂದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಾರ್ಜ್ ಕಾನೂನು ಕ್ರಮ ತಗೋತೀವಿ ಅಂತಾರೆ.

ಅವರ ಕುಟುಂಬದವರು ಇದರಲ್ಲಿದ್ದರೆ ಸುಮ್ಮನಿರುತ್ತಿದ್ರಾ ಎಂದು ಪ್ರಶ್ನಿಸಿದರು. ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಭಾನುವಾರ ಹಿಂದೂ ಧರ್ಮ ಜಾಗೃತಿ ಸಮಿತಿ ಆಯೋಜಿಸಿದ್ದ ಹಿಂದೂ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಹಿಂದೂ ಧರ್ಮ, ಹಿಂದೂ ಸಂಸ್ಕೃತಿ ಉಳಿಸಲು ಹೋರಾಟ ಮಾಡಿದ್ದಕ್ಕೆ ತಮ್ಮ ಮೇಲೆ ಇದುವರೆಗೂ 92 ಕೇಸ್ ದಾಖಲಾಗಿದ್ದು ಶೀಘ್ರವೇ ಇದು 100 ಆಗಲಿದೆ. ಆದರೆ ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ.

ಇನ್ನೂ ಮುಖ್ಯಮಂತ್ರಿಗಳು ಶ್ರೀರಾಮ ಸೇನೆಯನ್ನು ಬ್ಯಾನ್ ಮಾಡುತ್ತೇನೆ ಎನ್ನುತ್ತಾರೆ. ಆದರೆ ಸೇನೆಯನ್ನು ನಿಷೇಧಿಸುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ತಮ್ಮ ಹೆಸರಿನಲ್ಲೇ ರಾಮ ಇದ್ದಾನೆ ಎಂದು ಗೊತ್ತಾಗಲಿ ಎಂದು ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ