ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು. ಶತಮಾನದ ಸಂಭ್ರಮದ ಅಂಗವಾಗಿ ಹಮ್ಮಿಕೊಂಡಿದ್ದ, ರಸ ಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ಶ್ರೀ.ಪಾ.ಚಂದ್ರಶೇಖರ ಚಡಗರವರು ಉದ್ಘಾಟಿಸಿದರು.
ಶ್ರೀ.ಎಂ.ಎಸ್.ಗುಣಶೀಲನ್‌ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಶ್ರೀ.ಎ.ಸಿ.ಪ್ರದೀಪ್, ವೀರಶೇಖರಸ್ವಾಮಿ, ಶ್ರೀಮತಿ ಶಶಿಕಲಾ ಆರ್, ಕೆ.ರಾಮಚಂದ್ರ ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಎಂಟು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಮೂರು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕನ್ನಡ ನಾಡುನುಡಿ ಮತ್ತು ಕನ್ನಡಿಗರ ಸಾಧನೆಯ ಬಗ್ಗೆ ಸ್ಪರ್ಧೆಯನ್ನು ನಡೆಸಲಾಯಿತು.
ಸ್ಪರ್ಧೆಯಲ್ಲಿ ವಿವಿಧ ಶಾಲಾ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಗಮನ ಸೆಳೆದರು.