ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಆಹಾರದಲ್ಲಿ ವಿಷ ಸೇರಿಸಿ ಬೀದಿನಾಯಿಗಳ ಹತ್ಯೆ

ಶವಗಳ ಮರಣೋತ್ತರ ಪರೀಕ್ಷೆ

ಬೆಂಗಳೂರು: ಆಹಾರದಲ್ಲಿ ವಿಷ ಸೇರಿಸಿ ಬೀದಿನಾಯಿಗಳನ್ನು ಹತ್ಯೆ ಮಾಡಿರುವ ಘಟನೆ ಜಗಜೀವನ್‌ರಾಮ್ ನಗರದಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಕಿಗೆ ಬಂದಿದೆ.

ಈ ಪ್ರದೇಶದಲ್ಲಿ ಸುಮಾರು 10 ಶ್ವಾನಗಳು ಹಾಗೂ ಕಾಗೆಗಳು ಮೃತಪಟ್ಟಿವೆ. ಬೀದಿ ಬದಿಯಲ್ಲಿ ಅಲ್ಲಲ್ಲಿ ಬಿದ್ದಿದ್ದ ನಾಯಿ, ಕಾಗೆಗಳನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾನುವಾರ ಈದ್-ಮಿಲಾದ್ ಹಬ್ಬ ಇದ್ದ ಹಿನ್ನೆಲೆಯಲ್ಲಿ ಯಾರೋ ದುಷ್ಕರ್ಮಿಗಳು ಬಿರಿಯಾನಿಯಲ್ಲಿ ವಿಷ ಸೇರಿಸಿ ಬಡಿಸಿದ್ದಾರೆ.

ಈ ಸಂಬಂಧ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿ ಸತ್ಯ ಅವರು ಜಗಜೀವನ್ ರಾಮ್ ನಗರದಲ್ಲಿ ದೂರು ದಾಖಲಿಸಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು, ವರದಿ ಬಂದ ನಂತರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel