ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ನಿಮಿತ್ತ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಅನಾಹುತ ತಪ್ಪಿದೆ.
ಬೆಂಗಳೂರಿನ ಹೆಚ್‌ಎಎಲ್ ಏರ್‌ಪೋರ್ಟ್‌ನಿಂದ ಮೈಸೂರಿಗೆ ತೆರಳಬೇಕಿತ್ತು. ಇದಕ್ಕಾಗಿ ಹೆಲಿಕಾಪ್ಟರ್‌ನಲ್ಲಿ ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಗೃಹ ಸಚಿವ ಕೆ.ಜೆ ಜಾರ್ಜ್, ಲೋಕೋಪಯೋಗಿ ಸಚಿವ ಹೆಚ್.ಸಿ ಮಹದೇವಪ್ಪ, ಜಂಟಿ ಕಾರ್ಯದರ್ಶಿ ರಾಮಯ್ಯ, ಸಿಎಂ ಮಾಧ್ಯಮ ಸಂಯೋಜಕ ಪ್ರಭಾಕರ್ ಹೆಲಿಕಾಪ್ಟರ್ ಹತ್ತಿದ್ದರು.
ಮುಖ್ಯಮಂತ್ರಿಗಳು ಕುಳಿತಿದ್ದ ಹೆಲಿಕಾಪ್ಟರ್ ಇನ್ನೇನು ಟೆಕ್‌ಆಫ್ ಆಗಬೇಕಿತ್ತು ಅಷ್ಟರಲ್ಲಿ ಕಾಪ್ಟರ್‌ನಲ್ಲಿ ತಾಂತ್ರಿಕದೋಷ ಕಾಣಿಸಿಕೊಂಡಿದೆ. ಇದಾದ ಕೆಲವೇ ಕ್ಷಣದಲ್ಲಿ ಹೆಲಿಕಾಪ್ಟರ್‌ನ ಸೈಲೆನ್ಸರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಅರಿತ ರಕ್ಷಣಾ ಸಿಬ್ಬಂದಿ ಕೂಡಲೇ ಮುಖ್ಯಮಂತ್ರಿಗಳುನ್ನು ಕೆಳಗಿಳಿಸಿದರು. ಮುಖ್ಯಮಂತ್ರಿಗಳು ಕೆಲ ಕಾಲ ಏರ್‌ಪೋರ್ಟ್‌ನಲ್ಲೇ ವಿಶ್ರಾಂತಿ ಪಡೆದು ಬಳಿಕ ಕಾರಿನಲ್ಲೇ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ.