ನಗರಸಭೆ ಸದಸ್ಯ ನಿಜಾಂ ಪಾಷ(38) 
ಜಿಲ್ಲಾ ಸುದ್ದಿ

ನಗರಸಭೆ ಸದಸ್ಯನ ಹತ್ಯೆ

13ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯರಾಗಿದ್ದ ಇವರು ರೌಡಿ ಪಟ್ಟಿಯಲ್ಲಿದ್ದು...

ರಾಮನಗರ: ನಗರಸಭೆ ಸದಸ್ಯ ನಿಜಾಂ ಪಾಷ(38) ಅವರನ್ನು ನಗರದ ರೈಲು ನಿಲ್ದಾಣದಲ್ಲಿ ಮಂಗಳವಾರ ಹಾಡಹಗಲೇ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

13ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯರಾಗಿದ್ದ ಇವರು ರೌಡಿ ಪಟ್ಟಿಯಲ್ಲಿದ್ದು, ಕೊಲೆ ಸೇರಿ ನಾನಾ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಹತ್ಯೆಗೆ ಹಳೆ ವೈಷಮ್ಯ ಕಾರಣ ಎಂದು ಶಂಕಿಸಲಾಗಿದೆ. ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮಧ್ಯಾಹ್ನ 3.20ರ ಸುಮಾರಿಗೆ ನಿಜಾಂ ಪಾಷ ತನ್ನ ಸ್ನೇಹಿತ ಅಮೀರ್‌ಜಾನ್ ಎಂಬುವರ ಜತೆ ಬೈಕ್‌ನಲ್ಲಿ ಹಿಂಬದಿ ಕುಳಿತು ನಗರಸಭೆಯಿಂದ ರೈಲು ನಿಲ್ದಾಣ ರಸ್ತೆಯಲ್ಲಿ ತೆರಳುತ್ತಿದ್ದರು. ರೈಲ್ವೆ ಅಂಡರ್ ಪಾಸ್ ಕಡೆಯಿಂದ 5 ಬೈಕ್‌ಗಳಲ್ಲಿ ಬಂದ 10 ದುಷ್ಕರ್ಮಿಗಳು ಪಾಷ ಇದ್ದ ಬೇಕ್ ಅಡ್ಡಗಟ್ಟಿ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ.

ಕೆಳೆಗ ಬಿದ್ದ ನಿಜಾಂ ಪಾಷ ತಮ್ಮ ಬಳಿಯಿದ್ದ ಪಿಸ್ತೂಲ್ ಹೊರತೆಗೆದಾಗ ದುಷ್ಕರ್ಮಿಗಳ ಪೈಕಿ ಇಬ್ಬರನ್ನು ಹೊರತುಪಡಿಸಿ ಉಳಿದೆಲ್ಲರೂ ಪರಾರಿಯಾಗಿದರು. ಈ ಇಬ್ಬರು ನಿಜಾಂ ಪಾಷರಿಂದ ಪಿಸ್ತೂಲ್ ಕಸಿದು, ಅವರ ತಲೆಗೆ ಗುಂಡುಹಾರಿಸಿದರು.

ರಕ್ತದ ಮಡುವಿನಲ್ಲಿ ಬಿದ್ದ ನಿಜಾಂ ಪಾಷ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!