ಹೈಕೋರ್ಟ್‌ 
ಜಿಲ್ಲಾ ಸುದ್ದಿ

ಕೆಪಿಎಸ್‌ಸಿ ನೇಮಕ: ಹೈಕೋರ್ಟ್‌ನಲ್ಲಿ ಪಿಐಎಲ್

ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಲ್ಲಿರುವ ಕೆಪಿಎಸ್‌ಸಿಗೆ ಹೊಸ ಸಮಸ್ಯೆಯೊಂದು ತಳಕು ಹಾಕಿಕೊಂಡಿದೆ...

ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಲ್ಲಿರುವ ಕೆಪಿಎಸ್‌ಸಿಗೆ ಹೊಸ ಸಮಸ್ಯೆಯೊಂದು ತಳಕು ಹಾಕಿಕೊಂಡಿದೆ. ಅಧ್ಯಕ್ಷ ಮತ್ತು ಏಳು  ಮಂದಿ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ರಾಜ್ಯ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವನ್ನೇ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ  ದಾಖಲು ಮಾಡಲಾಗಿದೆ.

ರಾಜ್ಯಪಾಲರನ್ನೇ ಪ್ರತಿವಾದಿಯನ್ನಾಗಿ ಮಾಡಬೇಕು ಎಂಬ ಅರ್ಜಿದಾರರ ಮನನಿ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾ. ರಾಮಮೋಹನ ರೆಡ್ಡಿ ಅವರಿದ್ದ ದ್ವಿಸದಸ್ಯ ಪೀಠ, ಅವರ ಕಚೇರಿಯನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಸೂಚನೆ ನೀಡಿದೆ. ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ಸಂಪುಟದ ನಿರ್ಧಾರವೇನು?

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್‌ನ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಹಾಗೂ ಸದಸ್ಯ ಸ್ಥಾನಕ್ಕೆ ಡಾ. ನಾಗಬಾಯಿ ಬಿ. ಬುಲ್ಲಾ, ಡಾ.ರವಿಕುಮಾರ್, ಸೈಯದ್ ಉಲ್ತಾಫ್ ಹುಸೇನ್, ರಘುನಂದನ್ ರಾಮಣ್ಣ, ಪ್ರೊ. ಎಚ್ ಗೋವಿಂದಯ್ಯ, ಮೃತ್ಯುಂಜಯ ಮತ್ತು ಮೈಕಲ್ ಸೈಮನ್  ಬಾರೆಟ್ಟೂ ಅವರ ಹೆಸರನ್ನು ನಾಮನಿರ್ದೇಶನ ಮಾಡಲು ತೀರ್ಮಾನಿಸಲಾಗಿತ್ತು.

ಅರ್ಜಿದಾರರ ಮನವಿ?

  • ಕೆಪಿಎಸ್‌ಸಿ ಅಧ್ಯಕ್ಷ ಮತ್ತು ಸದಸ್ಯರ ನೇಮಕ ವಿಚಾರದಲ್ಲಿ ಸರ್ಕಾರ ಮತ್ತು ರಾಜ್ಯಪಾಲರು ಸೂಕ್ತ ಮಾರ್ಗಸೂಚಿ ಹೊರಡಿಸಬೇಕು.
  • ಮಾರ್ಗಸೂಚಿ ರಚನೆಯಾಗುವವರೆಗೂ ಸರ್ಕಾರ ಶಿಫಾರಸು ಮಾಡಿರುವ ಹೆಸರುಗಳನ್ನು ತಡೆಯುವಂತೆ ರಾಜ್ಯಪಾಲರಿಗೆ ಆದೇಶಿಸಬೇಕು.
  • ಸುಪ್ರೀಂ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ಗಳ ಆದೇಶದಂತೆ ಮಾರ್ಗಸೂಚಿ ನಿಯಮಾವಳಿ ರಚನೆಗೆ ರಾಜ್ಯಪಾಲರಿಗೆ ಸೂಚಿಸಬೇಕು.
  • ಕೆಪಿಎಸ್‌ಸಿ ಪದಾಧಿಕಾರಿಗಳ ನೇಮಕ ಮಾಡುವಾಗ ಲೋಕಾಯುಕ್ತರಿಗೆ ಸಮನಾದ ವಿಚಕ್ಷಣ ದಳಕ್ಕೆ ಪಟ್ಟಿ ನೀಡಿ ಒಪ್ಪಿಗೆ ಪಡೆಯಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ