ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕೌನ್ಸಿಲರ್ ಹತ್ಯೆ: ಪ್ರಮುಖ ಆರೋಪಿ ಶರಣು

ರೌಡಿ ಕೌನ್ಸಿಲರ್ ನಿಜಾಂ ಪಾಷ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಮದ್ ರಾಮನಗರದ ಹಿರಿಯ ಸಿವಿಲ್...

ರಾಮನಗರ: ರೌಡಿ ಕೌನ್ಸಿಲರ್ ನಿಜಾಂ ಪಾಷ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಮದ್ ರಾಮನಗರದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಶುಕ್ರವಾರ ಶರಣಾಗಿದ್ದಾನೆ.

ಬೆಂಗಳೂರಿನ ನಾಲ್ವರು ವಕೀಲರ ಜತೆ ನ್ಯಾಯಾಲಯಕ್ಕೆ ಬೆಳಗ್ಗೆ 11.15ಕ್ಕೆ ಆಗಮಿಸಿದ ಸಮದ್, ನ್ಯಾಯಾಧೀಶ ಎಸ್.ಎಚ್.ಹೊಸಗೌಡರ್ ಅವರೆದುರು ಶರಣಾದ. ನ್ಯಾಯಾಧೀಶರು ಆರೋಪಿಯನ್ನು ಜ.29ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ನಿಜಾಂ ಪಾಷ ಹತ್ಯೆಗೂ ಸಮದ್‌ಗೂ ಸಂಬಂಧವಿಲ್ಲ. ಆದರೆ, ಪೊಲೀಸರು ಈತನನ್ನು ಮೊದಲ ಆರೋಪಿಯಾಗಿಸಿದ್ದು, ಬಂಧಿಸಲು ಹುಡುಕಾಡುತ್ತಿದ್ದಾರೆ. ಅಂತೆಯೇ ಜೀವಭಯದ ಹಿನ್ನೆಲೆಯಲ್ಲಿ ಸಮದ್ ಶರಣಾಗುತ್ತಿದ್ದಾನೆ ಎಂದು ಆತನ ಪರ ವಕೀಲರು ವಕಾಲತ್ತು ಅರ್ಜಿಯಲ್ಲಿ ಹೇಳಿದ್ದಾರೆ.

ಆರೋಪಿಯನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ಒಪ್ಪಿಸುವಂತೆ ಪೊಲೀಸ್ ತನಿಖಾಧಿಕಾರಿ ಕೋರಿಕೆ ಸಲ್ಲಿಸಲಿಲ್ಲ. ಹೀಗಾಗಿ ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!