ಬೆಂಗಳೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಗಂಡ ತನ್ನ ಪತ್ನಿ ಮತ್ತು ಅತ್ತೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ನಗರದ ಪೀಣ್ಯದಲ್ಲಿ ನಡೆದಿದೆ.
ಬೆಂಗಳೂರಿನ ಪೀಣ್ಯ ಬಳಿಯ ಶಿವಪುರದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸೋಮಶೇಖರ್ ತನ್ನ ಪತ್ನಿ ಮತ್ತು ಅತ್ತೆಯ ತಲೆ ಮೇಲೆ ಕಲ್ಲುಎತ್ತುಹಾಕಿ ಹತ್ಯೆಗೈದು, ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
32 ವರ್ಷದ ಚಂದ್ರಕಲಾ, 45 ವರ್ಷದ ಓಂಕಾರಮ್ಮ ಹತ್ಯೆಗೀಡಾದವರು. ಇವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ನಿವಾಸಿಗಳು ಎಂದು ತಿಳಿದು ಬಂದಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸೋಮಶೇಖರ್‌ಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ.