ಜಿಲ್ಲಾ ಸುದ್ದಿ

ಕೊತ್ವಾಲ್ ವಿರುದ್ಧ ಗೂಂಡಾ ಕಾಯ್ದೆ

ಇಪ್ಪತ್ತೆರಡನೇ ವರ್ಷಕ್ಕೆ 32 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಸದ್ಯ ಜೈಲಿನಲ್ಲಿರುವ ಆರೋಪಿ...

ಬೆಂಗಳೂರು: ಇಪ್ಪತ್ತೆರಡನೇ ವರ್ಷಕ್ಕೆ 32 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಸದ್ಯ ಜೈಲಿನಲ್ಲಿರುವ ಆರೋಪಿ ವಿಶ್ವಾಸ್ ಅಲಿಯಾಸ್ ಕೊತ್ವಾಲ್‌ನ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಕ್ರಮಕೈಗೊಳ್ಳಲಾಗುವುದು ಎಂದು ಕೇಂದ್ರ ವಿಭಾಗ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದರು.

ತನ್ನ ಸಹಚರರರೊಂದಿಗೆ ಸೇರಿ ಹಲ್ಲೆ, ಕೊಲೆ ಯತ್ನ, ರಾಬರಿ, ಸರ ಅಪಹರಣ, ದರೋಡೆ ಸಿದ್ಧತೆ, ಮನೆ ಕಳ್ಳತನ ಮುಂತಾದ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ವಿಶ್ವಾಸ್ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಕ್ರಮಕ್ಕೆ ಪೊಲೀಸ್ ಆಯುಕ್ತರಿಗೆ ವರದಿ ಸಲ್ಲಿಸಲಾಗಿತ್ತು. ಈ ವರದಿ ಆಧಾರಿಸಿ ನಗರ ಪೊಲೀಸ್ ಆಯುಕ್ತರು ಗೂಂಡಾ ಕಾಯ್ದೆ ಅನ್ವಯ ಕ್ರಮಕ್ಕೆ ಆದೇಶಿಸಿದ್ದಾರೆ.

ವಿಶ್ವಾಸ್ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ 32 ಪ್ರಕರಣಗಳು ದಾಖಲಾಗಿವೆ. ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ಷರತ್ತುಗಳನ್ನು ಉಲ್ಲಂಘಿಸಿ ತನ್ನ ಅಪರಾಧ ಕೃತ್ಯಗಳನ್ನು ಮುಂದುವರೆಸಿದ್ದ. ಇತ್ತೀಚೆಗೆ ವಿವೇಕ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!