ಜಿಲ್ಲಾ ಸುದ್ದಿ

ಸಿಎಂ ಕಾಪ್ಟರ್‌ನಲ್ಲಿ ಬೆಂಕಿ: ತನಿಖೆಗೆ ಜರ್ಮನಿ ತಂಡ

ಸಿಎಂ ಸಿದ್ದರಾಮಯ್ಯ ಅವರ ಹೆಲಿಕಾಫ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣದ ಬಗ್ಗೆ ತನಿಖೆ ನಡೆಸುವುದಕ್ಕಾಗಿ ಜರ್ಮನಿಯ ತಂತ್ರಜ್ಞರ ತಂಡ ಸದ್ಯದಲ್ಲೇ...

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಹೆಲಿಕಾಫ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣದ ಬಗ್ಗೆ ತನಿಖೆ ನಡೆಸುವುದಕ್ಕಾಗಿ ಜರ್ಮನಿಯ ತಂತ್ರಜ್ಞರ ತಂಡ ಸದ್ಯದಲ್ಲೇ ಬೆಂಗಳೂರಿಗೆ ಆಗಮಿಸಲಿದೆ.

ಜ.10ರಂದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ.ಜಾರ್ಜ್ ಲೋಕೋಪಯೋಗಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಹಾಗೂ ಜಂಟಿ ಕಾರ್ಯದರ್ಶಿ ರಾಮಯ್ಯ ಅವರು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ದೆಹಲಿ ಮೂಲದ ಪ್ರಭಾತಂ ಏವಿಯೇಶನ್‌ನ ಇಸಿ-135 ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ತೆರಳುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಸ್ತೆ ಮೂಲಕ ಮೈಸೂರಿಗೆ ಸಾಗಿದ್ದರು.

ಈ ಪ್ರಕಣಕ್ಕೂ ಮುನ್ನ ಇದೇ ಸಂಸ್ಥೆಯ ಹೆಲಿಕಾಫ್ಟರ್‌ನಲ್ಲಿ ಸಿದ್ದರಾಮಯ್ಯ ಪ್ರಯಾಣ ಬೆಳೆಸುವ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಹೀಗಾಗಿ ವಿಮಾನಯಾನ ಸಂಸ್ಥೆಗೆ ರಾಜ್ಯ ಸರ್ಕಾರದ ವತಿಯತಿಂದ ಪತ್ರ ಬರೆಯಲಾಗಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸುವುದಕ್ಕೆ ವಿಮಾನಯಾನ ಸಂಸ್ಥೆ ಜರ್ಮನಿಯ ತಂತ್ರಜ್ಞರನ್ನು ಕರೆಸಿಕೊಳ್ಳುತ್ತಿದೆ.

ಇದೆಲ್ಲದರ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಪ್ರವಾಸಕ್ಕೆ ಇನ್ನು ಮುಂದೆ ಪವನ್ ಹಂಸ್ ಸಂಸ್ಥೆಯ ಹೆಲಿಕಾಪ್ಟರ್ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಪದೇ ಪದೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಾರ್ಯಾಲಯ ಈ ನಿರ್ಧಾರ ತೆಗೆದುಕೊಂಡಿದೆ. ಗುರುವಾರ ತಮ್ಮ ಅಧಿಕೃತ ಪ್ರವಾಸಕ್ಕೆ ಅವರು ಇದೇ ಸಂಸ್ಥೆಯ ವಿಮಾನ ಬಳಸಿಕೊಂಡಿದ್ದಾರೆ.

ಲೀಸ್ ಸಾಧ್ಯತೆ: ಇಷ್ಟು ದಿನ ಅಗತ್ಯತೆಗೆ ಅನುಸಾರವಾಗಿ ಹೆಲಿಕಾಪ್ಟರ್ ಸೇವೆ ಪಡೆಯಲಾಗುತ್ತಿತ್ತು. ಆದರೆ ಇನ್ನು ಮುಂದೆ ನಿಗದಿತ ಸಂಸ್ಥೆಯ ಹೆಲೆಕಾಪ್ಟರ್‌ನ್ನು ಲೀಸ್‌ಗೆ ಪಡೆಯಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಸದ್ಯದಲ್ಲೇ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!