ಕರ್ನಾಟಕ ಹಾಲು ಮಹಾಮಂಡಳ 
ಜಿಲ್ಲಾ ಸುದ್ದಿ

ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾಗಿ ರಾಮಲಿಂಗೇಗೌಡ ನೇಮಕ

ಕರ್ನಾಟಕ ಹಾಲು ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಐ. ಆರ್. ರಾಮಲಿಂಗೇಗೌಡ...

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಐ. ಆರ್. ರಾಮಲಿಂಗೇಗೌಡ ಅವರನ್ನು ಮಂಡಳ ನೇಮಕ ಮಾಡಿದೆ.

ಹೈಕೋರ್ಟ್ ಆದೇಶವನ್ನು ಪಾಲಿಸಲು ರಾಮಲಿಂಗೇಗೌಡರನ್ನು ನೇಮಕ ಮಾಡಲಾಗಿದೆ. ಹೀಗಾಗಿ ಸರ್ಕಾರ ಜಯರಾಂ ಅವರನ್ನು ಎಂಡಿ ಆಗಿ ನೇಮಿಸಿ ಜ.30ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಮಂಡಳಿ ಮನವಿ ಮಾಡಿಕೊಂಡಿದೆ.

ಹೈಕೋರ್ಟ್ ವಿಭಾಗೀಯ ಪೀಠದೆದುರು ಮಹಾ ಮಂಡಳಿ ರಾಮಲಿಂಗೇಗೌಡರ ಅಮಾನತು ಹಿಂಪಡೆಯುವುದಾಗಿ ಹೇಳಿತ್ತು. ಅದರಂತೆ ಅಮಾನತು ಹಿಂಪಡೆದು ನೇಮಕ ಮಾಡಲಾಗಿದೆ. ಜ. 31ರಂದು ಎ.ಎಸ್. ಪ್ರೇಮನಾಥ್ ನಿವೃತ್ತಿ ಹೊಂದಿದ್ದು, ಫೆ.1 ರಿಂದ ರಾಮಲಿಂಗೇಗೌಡ ಅ„ಕಾರ ವಹಿಸಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ರಾಮಲಿಂಗೇಗೌಡರನ್ನು 2011ರ ಜುಲೈನಲ್ಲಿ ಮಂಡಳ ಸೇವೆಯಿಂದ ಅಮಾನತುಗೊಳಿಸಿತ್ತು. ಇದರ ವಿರುದ್ಧ ಅವರು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್‍ನ ಏಕ ಸದಸ್ಯ ಪೀಠ ರಾಮಲಿಂಗೇಗೌಡರ ಅರ್ಜಿ ವಜಾಗೊಳಿಸಿತ್ತು. ಏಕ ಸದಸ್ಯಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠದಲ್ಲಿ ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದ್ದಾಗ ಮಹಾ ಮಂಡಳ ನವೆಂಬರ್ 2014ರಲ್ಲಿ ನ್ಯಾಯಾಲಯಕ್ಕೆ ಅಮಾನತು  ಹಿಂಪಡೆಯುವುದಾಗಿ ಹೇಳಿಕೆ ನೀಡಿತ್ತು. ವಿಭಾಗೀಯ ಪೀಠ ರಾಮಲಿಂಗೇಗೌಡರ ಮನವಿ ಪುರಸ್ಕರಿಸಿ, ಏಕ ಸದಸ್ಯ ಪೀಠದ ಆದೇಶ ರದ್ದುಗೊಳಿಸಿತ್ತು. ಅಮಾನತು ಹಿಂಪಡೆಯುವಂತೆ ಮಂಡಳಕ್ಕೆ ಸೂಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT