ಜಿಲ್ಲಾ ಸುದ್ದಿ

ರೆಹಮಾನ್ ಖಾನ್ ವಿರುದ್ಧ ಸಿವಿಲ್ ಪ್ರಕರಣ

ಬೆಂಗಳೂರು: ಅಮಾನತ್ ಕೋ-ಅಪರೇಟೀವ್ ಬ್ಯಾಂಕ್‍ನಲ್ಲಿ ನಡೆದಿರುವ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ವಿರುದ್ಧ ಸಿವಿಲ್ ಪ್ರಕರಣ ದಾಖಲಿಸುವುದಕ್ಕೆ ಸಹಕಾರ ಸಚಿವ ಎಚ್.ಎಸ್. ಮಹದೇವ್ ಪ್ರಸಾದ್ ಅನುಮತಿ ನೀಡಿರುವುದಾಗಿ ಸರ್ಕಾರದ ಪರ ವಕೀಲರು ಹೈಕೋರ್ಟ್‍ಗೆ ತಿಳಿಸಿದ್ದಾರೆ.

ನಷ್ಟದ ಸುಳಿಯಲ್ಲಿ ಸಿಲುಕಿರುವ ಅಮಾನತ್ ಕೋ ಅಪರೇಟಿವ್ ಬ್ಯಾಂಕ್ ಅನ್ನು ಕೆನರಾ ಬ್ಯಾಂಕ್ ನೊಂದಿಗೆ ವಿಲೀನಗೊಳಿಸುವ ಕ್ರಮವನ್ನು ಪ್ರಶ್ನಿಸಿ ಕೇಂದ್ರದ ಮಾಜಿ ಸಚಿವ ಜಾಫರ್ ಷರೀಫ್  ಸೇರಿ ಮತ್ತಿತರರು ಹೈಕೋರ್ಟ್‍ನಲ್ಲಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ. ಅಬ್ದುಲ್ ನಜೀರ್ ಅವರಿದ್ದ ಏಕಸದಸ್ಯ ಪೀಠ, ತಪ್ಪಿತಸ್ಥರ ವಿರುದಟಛಿ ಸಿವಿಲ್ ಪ್ರಕರಣ ದಾಖಲಿಸಿ ಬ್ಯಾಂಕ್‍ನ ನಷ್ಟ ತುಂಬುವ ಕಾರ್ಯಕ್ಕೆ ಮುಂದಾಗುವಂತೆ ನಿರ್ದೇಶಿಸಿದೆ. ಅಲ್ಲದೇ ಬ್ಯಾಂಕ್ ಪುನಶ್ಚೇತನಗೊಳಿಸುವ ಸಂಬಂಧ ಮುಂದಿನ ವಿಚಾರಣೆ ವೇಳೆಗೆ ಬಾಕಿ ಸಾಲದ ಮೊತ್ತ, ವಸೂಲು ಮಾಡಿರುವ ಮೊತ್ತ ಮತ್ತು ಅನವಶ್ಯಕವಾಗಿ ಕಾರ್ಯನಿರ್ವಹಿಸುತ್ತಿರುವ ಶಾಖೆಗಳ ವಿವರ ಒಳಗೊಂಡ ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ಈ ಹಿಂದೆ ವಿಚಾರಣೆ ವೇಳೆ, ಅಮಾನತ್ ಬ್ಯಾಂಕ್‍ನಲ್ಲಿ ನಡೆದಿದ್ದ ಸುಮಾರು ರು.102 ಕೋಟಿ ಅವ್ಯವಹಾರಹಾರಕ್ಕೆ ಸಂಬಂಧಿಸಿ ಅಂದಿನ ಬ್ಯಾಂಕ್ ನ ಅಧ್ಯಕ್ಷರಾಗಿದ್ದ ರೆಹಮಾನ್ ಕಾನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಕ್ರಮ ಕೈಗೊಳ್ಳುವಂತೆ ಸಹಕಾರ ಸಂಘಗಳ ನಿಬಂಧಕರು ಆದೇಶ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ರೆಹಮಾನ್ ಸಹಕಾರ ಸಚಿವರ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.

SCROLL FOR NEXT