ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕ ಸಾವು

ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್‌ನಲ್ಲಿ ಪ್ರಯಾಣಿಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್‌ನಲ್ಲಿ ಪ್ರಯಾಣಿಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಮೆಜೆಸ್ಟಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿಗೆ ತೆರಳುತ್ತಿದ್ದ ಬಸ್‌ನಲ್ಲಿ 35 ವರ್ಷದ ವೆಂಕಟರಮಣ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಸೀಟ್‌ನಲ್ಲಿ ಕುಳಿತಿದ್ದ ವೆಂಕಟರಮಣ ಸಾವಿನ ಬಗ್ಗೆ ಸಹ ಪ್ರಯಾಣಿಕರು ಬಸ್‌ನ ನಿರ್ವಾಹಕ ಹಾಗೂ ಚಾಲಕನಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಚಾಲಕ ಬಸ್‌ನ್ನು ಮಡಿವಾಳ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.

ಪರಿಶೀಲನೆ ನಡೆಸಿದ ಪೊಲೀಸರು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video