ಕಬ್ಬಿನ ಗದ್ದೆಗೆ ಬೆಂಕಿ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಮಂಡ್ಯದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ಹಾಕಿ ಆತ್ಮಹತ್ಯೆಗೆ ಯತ್ನ; 3 ಮಹಿಳೆಯರ ರಕ್ಷಣೆ

ಸಾಲಬಾಧೆ ತಾಳಲಾರದೆ ರಾಜ್ಯದ ರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ದಿನಪ್ರತಿ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ವರದಿಯಾಗುತ್ತಲೆ ಇವೆ...

ಮಂಡ್ಯ: ಸಾಲಬಾಧೆ ತಾಳಲಾರದೆ ರಾಜ್ಯದ ರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ದಿನಂಪ್ರತಿ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ವರದಿಯಾಗುತ್ತಲೆ ಇವೆ. ಇದೀಗ ಮಂಡ್ಯ ಎಚ್‌. ಮಲ್ಲಿಗೆರೆ ಗ್ರಾಮದಲ್ಲಿ ಮೂವರು ರೈತ ಮಹಿಳೆಯರು ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ ಸಾಮೂಹಿಕ ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆಸಿದೆ.

ಮಲ್ಲಿಗೆರೆ ಗ್ರಾಮದ ನಿವಾಸಿಗಳಾದ ಸುನಂದಾ, ಜಯಂತಿ ಮತ್ತು ಪಾರ್ವತಮ್ಮ ಎಂಬುವರು ಬೆಂಕಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಗ್ರಾಮಸ್ಥರು ಮೂವರನ್ನು ರಕ್ಷಿಸಿದ್ದಾರೆ.

ಕಬ್ಬು ಕಟಾವಿಗೆ ಬಂದರೂ ಉತ್ತಮ ಬೆಲೆ ಸಿಗದೆ ಬೆಳೆ ಒಣಗಿ ಹೋಗುತ್ತಿದ್ದು, ಇನ್ನೊಂಡೆದೆ ಸಾಲಗಾರರ ಕಾಟದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮಸ್ಥರು ಕೂಡಲೆ ರಕ್ಷಣೆ ಮಾಡಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಬ್ಬು ಬೆಳೆಗೆ ಬೆಂಕಿ ಹಾಕಿದ್ದರಿಂದ ಸುಮಾರು 10 ಎಕರೆಗೂ ಹೆಚ್ಚು ಕಬ್ಬು ಬೆಳೆ ಬೆಂಕಿಗಾಹುತಿಯಾಗಿದೆ. ಸುದ್ದಿ ತಿಳಿಸಿದ ಕೂಡಲೆ ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ಕಳೆದ ಜೂನ್‌ 25ರಂದು ಸಾಲಬಾಧೆ ತಾಳಲಾರದೆ ತನ್ನ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ ರೈತ ನಂಜೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ