ಕಿಮ್ಸ್ ಗೆ 3.20 ಕೋಟಿ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್ 
ಜಿಲ್ಲಾ ಸುದ್ದಿ

ಕಿಮ್ಸ್ ಗೆ 3.20 ಕೋಟಿ ರೂಪಾಯಿ ದಂಡ

ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಒಕ್ಕಲಿಗರ ಸಂಘಕ್ಕೆ(ಕಿಮ್ಸ್ ) ಹೈಕೋರ್ಟ್ ಬುಧವಾರ 3.20 ಕೋಟಿ ರೂಪಾಯಿ ಮೊತ್ತದ ಭಾರಿ ದಂಡ ವಿಧಿಸಿದೆ...

ಬೆಂಗಳೂರು: 2014-15ನೇ ಸಾಲಿನಲ್ಲಿ ಲಭ್ಯವಿದ್ದ ಒಂದು ವೈದ್ಯಕೀಯ(ಎಂಬಿಬಿಎಸ್) ಸೀಟಿಗೆ ನಾಲ್ಕು ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು ಅವರಿಂದ ಕೋಟ್ಯಂತರ ರೂಪಾಯಿ ಶುಲ್ಕ ಪಡೆದ ನಂತರ ಸೀಟು ನಿರಾಕರಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಒಕ್ಕಲಿಗರ ಸಂಘಕ್ಕೆ(ಕಿಮ್ಸ್ ) ಹೈಕೋರ್ಟ್ ಬುಧವಾರ 3.20 ಕೋಟಿ ರೂಪಾಯಿ ಮೊತ್ತದ ಭಾರಿ ದಂಡ ವಿಧಿಸಿದೆ.

ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಕಾಲೇಜು ಮೊದಲು ಎಂಬಿಬಿಎಸ್ ಸೀಟು ನೀಡಿ ನಂತರ ಸೀಟು ನಿರಾಕರಿಸಿದ್ದರಿಂದ ವಿದ್ಯಾರ್ಥಿಗಳಾದ ಕೆ.ಆರ್. ಗಿರೀಶ್ ರಿತ್ವಿಕ್, ಆರ್. ಲೇಖಶ್ರೀ, ಶ್ರೀಕರ್ ಸುರಪನೇನಿ ಮತ್ತು ವಿದಾನ್ಯ ವೆಂಕಟೇಶ್ ಅವರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಅವರು ಈ ಭಾರೀ ಮೊತ್ತದ ದಂಡ ವಿಧಿಸಿದ್ದಾರೆ.

ಸೀಟು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ನಾಲ್ವರು ವಿದ್ಯಾರ್ಥಿಗಳು ಕಾಲೇಜು ಮತ್ತು ಒಕ್ಕಲಿಗರ ಸಂಘದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಸೇರಿ ಅಗತ್ಯ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!