ದ್ವಿತೀಯ ಪಿಯು ಪ್ರವೇಶಕ್ಕೆ ಅವಧಿ ವಿಸ್ತರಣೆ
ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇ ಜುಗಳಲ್ಲಿ ದ್ವಿತೀಯ ಪಿಯುಸಿ ದಾಖಲು ದಿನಾಂಕವನ್ನು...
ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿಪೂರ್ವ ಕಾಲೇ ಜುಗಳಲ್ಲಿ ದ್ವಿತೀಯ ಪಿಯುಸಿ ದಾಖಲು ದಿನಾಂಕವನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಾಯದ ಮೇರೆಗೆ ಜುಲೈ 15ರವರೆಗೆನ ದ್ವಿತೀಯ ಪಿಯುಸಿಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಿ ಕೊಳ್ಳಲು ಕಾಲೇಜುಗಳಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಇಲಾಖೆ ತಿಳಿಸಿದೆ. ದಾಖಲಾತಿಗೆ ನಿಗದಿಪಡಿಸಿರುವ ಶುಲ್ಕಗಳೊಂದಿಗೆ ವಿದ್ಯಾರ್ಥಿ ಗಳಿಂದ ಅವರ ಹಾಜರಾತಿಯನ್ನು ಶೇ. 75ರಷ್ಟು ಕಾಯ್ದಿರಿಸಿಕೊಳ್ಳುವ ಕುರಿತು ಮುಚ್ಚಳಿಕೆ ಪಡೆದು ಕೊಂಡ ನಂತರವೇ ಕಾಲೇಜಿನ ಪ್ರಾಂಶುಪಾಲರು ನಿಯಮಾನುಸಾರ ದಾಖಲಾತಿ ಮಾಡಿ ಕೊಳ್ಳಲು ಸೂಚಿಸಲಾಗಿದೆ. ಶುಲ್ಕದೊಂದಿಗೆ ದಂಡ ಶುಲ್ಕ ರು.504, ವಿಶೇಷ ದಂಡ ಶುಲ್ಕ ರು.1680 ಸೇರಿ ಒಟ್ಟು ರು. 2184 ನಿಗದಿಪಡಿಸಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.