ಎಂ.ಎನ್.ರೆಡ್ಡಿ, ಬೆಂಗಳೂರು ಪೊಲೀಸ್ ಆಯುಕ್ತರು 
ಜಿಲ್ಲಾ ಸುದ್ದಿ

ಎಂ.ಎನ್.ರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ, ಲೋಕಾಯುಕ್ತಕ್ಕೆ ದೂರು

ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಐಪಿಎಸ್ ಅಧಿಕಾರಿ, ಕರ್ನಾಟಕ ಪೊಲೀಸ್ ಗೃಹ ನಿರ್ಮಾಣ ನಿಗಮದ ಮುಖ್ಯಸ್ಥ ಸುಶಾಂತ್ ಮಹಾಪಾತ್ರ ಅವರು ಪೊಲೀಸ್ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು, 2011ರಿಂದ 2013ರವರೆಗೆ ಎಂ.ಎನ್.ರೆಡ್ಡಿ ಅವರು ಪೊಲೀಸ್ ಗೃಹ ನಿಗಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೇಳೆ, ಗೃಹ ನಿರ್ಮಾಣ ಕಾಮಗಾರಿಗಳಿಗೆ ಗುತ್ತಿಗೆ ನೀಡುವಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.

ರೆಡ್ಡಿ ಅವರು 5 ಕೋಟಿ ರುಪಾಯಿ ಕಾಮಗಾರಿಗೆ ಮಾತ್ರ ಅನುಮತಿ ನೀಡಬೇಕಾಗಿತ್ತು. ಆದರೆ ಅವರು ಅಧಿಕಾರ ವ್ಯಾಪ್ತಿ ಮೀರಿ 50 ಕೋಟಿ ರುಪಾಯಿ ಮೊತ್ತದ ಕಾಮಗಾರಿಗೆ ಅನುಮತಿ ನೀಡಿದ್ದಾರೆ ಎಂದು ಮಹಾಪಾತ್ರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಎಂ.ಎನ್.ರೆಡ್ಡಿ ಅವರು ಸಿಬಿಐ ಬ್ಲಾಕ್ ಲಿಸ್ಟ್‌ನಲ್ಲಿದ್ದ ಪರ್ಲ್ಸ್ ಕನ್ಸ್‌ಟ್ರಕ್ಷನ್ ಕಂಪನಿಗೆ ಗುತ್ತಿಗೆ ನೀಡಿದ್ದಾರೆ. ಹೀಗಾಗಿ ಇದರಲ್ಲಿ ಭಾರಿ ಅವ್ಯವಹಾರ ನಡೆದಿರುವ ಸಾಧ್ಯತೆ ಇದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದು ಮಹಾಪಾತ್ರ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!