ಎ.ಜಿ. ಕಚೇರಿಯಲ್ಲಿ ಇಫ್ತಾರ್ ಕೂಟ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಎ.ಜಿ. ಕಚೇರಿಯಲ್ಲಿ ಇಫ್ತಾರ್ ಕೂಟ

ರಾಜ್ಯ ಹೈಕೋರ್ಟ್‍ ಅಡ್ವೋಕೇಟ್ ಜನರಲ್ ಕಚೇರಿ ವತಿಯಿಂದ ಇಂದು ಇಫ್ತಾರ್ ಕೂಟ ಏರ್ಪಡಿಸಲಾಗಿದೆ...

ಬೆಂಗಳೂರು: ರಾಜ್ಯ ಹೈಕೋರ್ಟ್‍ ಅಡ್ವೋಕೇಟ್ ಜನರಲ್ ಕಚೇರಿ ವತಿಯಿಂದ ಇಂದು ಇಫ್ತಾರ್ ಕೂಟ ಏರ್ಪಡಿಸಲಾಗಿದೆ.

ಎ.ಜಿ.ಕಚೇರಿಯ ಇತಿಹಾಸದಲ್ಲೇ ಮೊದಲು ಎನ್ನಲಾದ ಈ ಕೂಟದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಇತರೆ ನ್ಯಾಯಮೂರ್ತಿಗಳು ಹಾಗೂ ನ್ಯಾಯಾಂಗ ಅಧಿಕಾರಿಗಳು ಸೇರಿದಂತೆ ಸುಮಾರು 75 ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಮಾಹಿತಿ ನೀಡಿದ್ದಾರೆ.

ಈ ಇಫ್ತಾರ್ ಕೂಟ ಏರ್ಪಡಿಸಿರುವುದನ್ನು ವಿರೋಧಿಸಿ ಬಿಜೆಪಿ ನಾಯಕ ಗೋ.ಮಧುಸೂಧನ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿರುವ ಕ್ರಮವನ್ನು ಅವರು ಖಂಡಿಸಿದರು. ಈ ಕುರಿತು ಮಾತನಾಡಿದ ರವಿವರ್ಮ ಕುಮಾರ್, ಇದೇ ಹೈಕೋರ್ಟ್ ಆವರಣದಲ್ಲಿ ವಕೀಲರು ವಿಶ್ರಮಿಸಿಕೊಳ್ಳಲು ಸಹ ಸಾಧ್ಯವಾಗದಂತೆ ವಾರಗಟ್ಟಲೆ ಗಣೇಶನ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆದಾಗ ಗೋ. ಮಧುಸೂಧನ್ ಏಕೆ ಚಕಾರ ಎತ್ತಲಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಇಂದು ಸಾಯಂಕಾಲ 6.45ರ ವೇಳೆಗೆ ಹೈಕೋರ್ಟ್ ಆವರಣದಲ್ಲಿರುವ ಶಾಂತಿ ಸಾಗರ್ ಹೊಟೇಲ್ ಬಳಿ ಈ ಇಫ್ತಾರ್ ಕೂಟ ಏರ್ಪಾಡಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!