ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ 
ಜಿಲ್ಲಾ ಸುದ್ದಿ

ರಾಹುಲ್ ರಾಜ್ಯ ಭೇಟಿ ಮಾಹಿತಿ ಇಲ್ಲ: ಆಸ್ಕರ್

ರಾಜ್ಯಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡುವ ವಿಚಾರದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ...

ಬೆಂಗಳೂರು: ರಾಜ್ಯಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡುವ ವಿಚಾರದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ.

ಉಡುಪಿ ಮತ್ತು ಮಂಗಳೂರು ಜಿಲ್ಲೆ ಶಾಸಕರ ಜತೆ ಬೆಂಗಳೂರಿನ ಶಕ್ತಿ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು. ರೈತರ ಆತ್ಮಹತ್ಯೆ ವಿಚಾರದಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಕಾಂಗ್ರೆಸ್ ಮೊದಲಿನಿಂದಲೂ ರೈತರ ಪರವಾಗಿದೆ.

ಈ ವಿಚಾರದಲ್ಲಿ ಪಕ್ಷದಲ್ಲಿ ಭಿನ್ನಮತ ಇಲ್ಲ. ಎಸ್.ಎಂ.ಕೃಷ್ಣ ಅವರು ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಭೇಟಿ ನೀಡಿದ್ದಾರೆ. ಭಾನುವಾರ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ ರೈತ ಕುಟುಂಬಗಳಿಗೆ ಸಾಂತ್ವನ ಹೇಳುತ್ತಾರೆ ಎಂದರು. ಅಪೆಕ್ಸ್ ಬ್ಯಾಂಕ್‍ಗೆ ಲಾಬಿ: ದಕ್ಷಿಣ ಕನ್ನಡ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಅವರನ್ನು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಆಸ್ಕರ್ ನೇತೃತ್ವದ ನಿಯೋಗ ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT