ಬಿಬಿಎಂಪಿ 
ಜಿಲ್ಲಾ ಸುದ್ದಿ

ಪಾಲಿಕೆ ಶೌಚಾಲಯಗಳಲ್ಲಿ ಮೂತ್ರ ವಿಸರ್ಜನೆ ಉಚಿತ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ 360 ಕ್ಕೂ ಹೆಚ್ಚಿನ ಸಾರ್ವಜನಿಕ ಶೌಚಾಲಯಗಳಲ್ಲಿ ಉಚಿತ ಮೂತ್ರ ವಿಸರ್ಜನೆಗೆ ಅವಕಾಶ ನೀಡಿ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ 360 ಕ್ಕೂ ಹೆಚ್ಚಿನ ಸಾರ್ವಜನಿಕ ಶೌಚಾಲಯಗಳಲ್ಲಿ ಉಚಿತ ಮೂತ್ರ ವಿಸರ್ಜನೆಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕರು ಮೂತ್ರ ವಿಸರ್ಜನೆಗೆ ಶುಲ್ಕ ಪಾವತಿಸುವ ಹಾಗೂ ಚಿಲ್ಲರೆ ಅಭಾವದ ವಿಚಾರದಲ್ಲಿ ವ್ಯತಿರಿಕ್ತ ಮನೋಭಾವ ಹೊಂದಿದ್ದಾರೆ. ಕೆಲವರು ಶೌಚಾಲಯ ಬಳಸದೆ ಸಾರ್ವಜನಿಕ ಸ್ಥಳಗಳನ್ನೇ ಮೂತ್ರ ವಿಸರ್ಜನೆಗೆ ಬಳಸುತ್ತಿದ್ದಾರೆ. ಇದರಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಶೌಚಾಲಯದಲ್ಲಿ ಉಚಿತ ಸೌಲಭ್ಯ ನೀಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಶೌಚಾಲಯಗಳಲ್ಲಿ 'ಮೂತ್ರ ವಿಸರ್ಜನೆ ಉಚಿತ' ಎಂಬ ಫಲಕ ಕಡ್ಡಾಯವಾಗಿ ಅಳವಡಿಸಬೇಕು. ಮುಂದಿನ ದಿನಗಳಲ್ಲಿ ಟೆಂಡರ್ ಕರೆಯುವಾಗಲೂ ಉಚಿತ ಎಂಬ ಬಗ್ಗೆ ಅಗತ್ಯ ಷರತ್ತುಗಳನ್ನು ಅಳವಡಿಸಬೇಕು ಎಂದು ಆಯುಕ್ತ ಜಿ.ಕುಮಾರ್ ನಾಯಕ್ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!