ರಾಜ್ಯಸಭೆ (ಫೋಟೋ ಕೃಪೆ: ಕೆಪಿಎನ್) 
ಜಿಲ್ಲಾ ಸುದ್ದಿ

ಮೇಲ್ಮನೆಯಲ್ಲಿ ಬಿಜೆಪಿ ಸಭಾತ್ಯಾಗ

ವಿವಾದಿತ ಬಿಬಿಎಂಪಿ ವಿಭಜನೆ ಕುರಿತ ನಗರ ಪಾಲಿಕೆಗಳ ತಿದ್ದುಪಡಿ ವಿಧೇಯಕವನ್ನು ವಿಧಾನಪರಿಷತ್ತಿನಲ್ಲಿ ಗುರುವಾರ ಅಂಗೀಕರಿಸಲಾಯಿತು. ಪರಿಷತ್ತಿನಲ್ಲಿ ಈಗಾಗಲೇ ತಿರಸ್ಕೃತವಾಗಿರುವ ಈ ವಿಧೇಯಕವನ್ನು ಎರಡು ಬಾರಿಗೆ ವಿಧಾನಸಭೆಯಲ್ಲಿ ಮಂಡಿಸಿ ಅಂಗಕರಿಸಲಾಗಿತ್ತು...

ವಿಧಾನಪರಿಷತ್ತು: ವಿವಾದಿತ ಬಿಬಿಎಂಪಿ ವಿಭಜನೆ ಕುರಿತ ನಗರ ಪಾಲಿಕೆಗಳ ತಿದ್ದುಪಡಿ ವಿಧೇಯಕವನ್ನು ವಿಧಾನಪರಿಷತ್ತಿನಲ್ಲಿ ಗುರುವಾರ ಅಂಗೀಕರಿಸಲಾಯಿತು. ಪರಿಷತ್ತಿನಲ್ಲಿ ಈಗಾಗಲೇ ತಿರಸ್ಕೃತವಾಗಿರುವ ಈ ವಿಧೇಯಕವನ್ನು ಎರಡು ಬಾರಿಗೆ ವಿಧಾನಸಭೆಯಲ್ಲಿ ಮಂಡಿಸಿ ಅಂಗಕರಿಸಲಾಗಿತ್ತು. ನಂತರ ಅದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಬೇಕಿತ್ತು. ಇದಕ್ಕೆ ವಿಧಾನಪರಿಷತ್ತಿನ ಅನುಮೋದನೆಯೂ ಬೇಕಿತ್ತು.

ಹೀಗಾಗಿ ವಿಧಾನಸಭೆಯಲ್ಲಿ ಅಂಗೀಕರಿಸಿದ್ದ ವಿಧೇಯಕವನ್ನು ಎರಡನೇ ಬಾರಿಗೆ ಪರಿಷತ್ತಿನಲ್ಲಿ ಮಂಡಿಸಲಾಯಿತು. ವಿಧೇಯಕವನ್ನು ಪರ್ಯಾಲೋಚನೆಗೆ ಹಾಕುತ್ತಿದ್ದಂತೆ ಇದು ಪ್ರತಿಪಕ್ಷ ಸದಸ್ಯರು ವಿಧೇಯಕದಲ್ಲಿ ಯಾವುದೇ ಸ್ಪಷ್ಟತೆ ಇಲ್ಲ ಎಂದು ಪ್ರತಿಭಟನೆ ನಡೆಸಿದರು. ಬಿಬಿಎಂಪಿಯನ್ನು ಎಷ್ಟು ಭಾಗಗಳಾಗಿ ವಿಂಗಡಿಸಲಾಗುತ್ತದೆ ಎನ್ನುವ ಯಾವುದೇ ಮಾಹಿತಿ ವಿಧೇಯಕದಲ್ಲಿ ಇಲ್ಲ. ಹೀಗಾಗಿ ಇದಕ್ಕೆ ನಮ್ಮ ಬೆಂಬಲ ಇಲ್ಲ ಎಂದು ಸಭಾತ್ಯಾಗ ಮಾಡಿದರು. ನಂತರ ಆಡಳಿತ ಪಕ್ಷದ ಸದಸ್ಯರ ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ