ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಕಾರುಗಳ ಭದ್ರತಾ ಪರಿಶೀಲನೆ ತಾಲೀಮು 
ಜಿಲ್ಲಾ ಸುದ್ದಿ

ಮೈಸೂರು ವಿವಿ ಶತಮಾನೋತ್ಸವಕ್ಕೆ ರಾಷ್ಟ್ರಪತಿ ಪ್ರಣಬ್ ಇಂದು ಚಾಲನೆ

ದೇಶದ ಆರನೇಯ ಹಾಗೂ ರಾಜ್ಯದ ಪ್ರಪ್ರಥಮ ವಿಶ್ವವಿದ್ಯಾಲಯವಾದ ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ...

ಮೈಸೂರು: ದೇಶದ ಆರನೇಯ ಹಾಗೂ ರಾಜ್ಯದ ಪ್ರಪ್ರಥಮ ವಿಶ್ವವಿದ್ಯಾಲಯವಾದ ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸೋಮವಾರ ಮಧ್ಯಾಹ್ನ 3ಕ್ಕೆ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಚಾಲನೆ ನೀಡಲಿದ್ದಾರೆ.

ರಾಜ್ಯಪಾಲ ವಿ.ಆರ್. ವಾಲ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್, ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಬಾರಿ ಸಂಸ್ಥಾಪನಾ ದಿನದಂದೇ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಇದೇ ಸಮಾರಂಭದಲ್ಲಿ ವಿಶ್ರಾಂತ ಕುಲಪತಿಗಳಾದ ಪ್ರೊ.ದೇಜಗೌ, ಡಾ.ಪಿ. ಸೆಲ್ವಿದಾಸ್, ಡಾ.ಎಂ. ಮಾದಯ್ಯ, ಪ್ರೊ.ಎಸ್.ಎನ್.ಹೆಗ್ಡೆ, ಪ್ರೊ.ಜೆ. ಶಶಿಧರ್ ಪ್ರಸಾದ್, ಪ್ರೊ.ವಿ.ಜಿ. ತಳವಾರ್, ಹಾಲಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಹಾಗೂ ವಿವಿಯ ಹಿರಿಯ  ವಿದ್ಯಾರ್ಥಿಯಾದ ನಿಘಂಟು ಬ್ರಹ್ಮ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರನ್ನು ಸನ್ಮಾನಿಸಲಾಗುತ್ತದೆ.

ರಾಜವಂಶಸ್ಥ್ಥರಾದ ಪ್ರಮೋದಾದೇವಿ ಒಡೆಯರ್, ಉತ್ತರಾಧಿಕಾರಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೂ ಆಹ್ವಾನ ನೀಡಲಾಗಿದೆ. 1916ರ ಜುಲೈ 27 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ವಿವಿ ಸ್ಥಾಪಿಸಿದರು. ದಿವಾನರಾಗಿದ್ದ ಸರ್.ಎಂ. ವಿಶ್ವೇಶ್ವರಯ್ಯ ಅವರು ಇದಕ್ಕೆ ಸಾಥ್ ನೀಡಿದರು. ಹೀಗಾಗಿ ಪ್ರತಿ ವರ್ಷ ಜು.27 ರಂದು ವಿವಿಯ ಸಂಸ್ಥಾಪನ ದಿನ ಆಚರಿಸಿ, ಉಪನ್ಯಾಸ ಏರ್ಪಡಿಸಿಕೊಂಡು ಬರಲಾಗುತ್ತಿದೆ.

ಶತಮಾನೋತ್ಸವ ಅಂಗವಾಗಿ 2016ರ ಜು.27 ರವರೆಗೆ ನಾನಾ ಕಾರ್ಯಕ್ರಮಗಳು ನಡೆಯಲಿದ್ದು, ಮುಕ್ತಾಯ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಭಾಗವಹಿಸುವ ನಿರೀಕ್ಷೆ ಇದೆ. ಮುಂದಿನ ವರ್ಷದ ಜನವರಿ 5 ರಿಂದ 7 ರವರೆಗೆ ಅಖಿಲ ಭಾರತ ವಿಜ್ಞಾನ ಕಾಂಗ್ರೆಸ್ ಅಧಿವೇಶನ ಕೂಡ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಜ.5 ರಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೈಸೂರಿನಲ್ಲಿ ವಿಜ್ಞಾನ ಕಾಂಗ್ರೆಸ್ ಅಧಿವೇಶನ ನಡೆಯುತ್ತಿರುವುದು ಇದು ಎರಡನೇ ಬಾರಿ. ಹಿಂದೆ 1982 ರಲ್ಲಿ ನಡೆದಿತ್ತು. ಆಗ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ಭಾಗವಹಿಸಿದ್ದರು.

ರಾಷ್ಟ್ರಪತಿಗಳ ಸ್ವಾಗತಕ್ಕೆ ಸಜ್ಜು

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸ್ವಾಗತಕ್ಕೆ ಮೈಸೂರು ನಗರ ಸಜ್ಜಾಗಿದೆ. ದೆಹಲಿಯಿಂದ ನೇರವಾಗಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಾಯುಪಡೆಯ ವಿಶೇಷ ವಿಮಾನದಲ್ಲಿ ಅವರು ಆಗಮಿಸುವರು. ಅಲ್ಲಿಂದ ಚಾಮುಂಡಿಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವರು.

ನಂಜನಗೂಡು ರಸ್ತೆ, ಗನ್‍ಹೌಸ್ ವೃತ್ತ, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತ, ಅಗ್ನಿಶಾಮಕ ಠಾಣೆ, ಕುಕ್ಕರಹಳ್ಳಿ ಕೆರೆ, ಬೋಗಾದಿ ರಸ್ತೆಯ ಮೂಲಕ ಮಾನಸಗಂಗೋತ್ರಿಯ ಬಯಲು ರಂಗಮಂದಿರ ತಲುಪುವರು. ರಾಷ್ಟ್ರಪತಿಗಳು ಸಂಚರಿಸುವ ಮಾರ್ಗವನ್ನು ಡಾಂಬರೀಕರಣ ಮಾಡಲಾಗಿದೆ. ವೃತ್ತಗಳಿಗೆ ಬಣ್ಣ ಬಳಿಯಲಾಗಿದೆ.

ಶತಮಾನೋತ್ಸವ ಅಂಗವಾಗಿ 2016ರ ಜು.27 ರವರೆಗೆ ನಾನಾ ಕಾರ್ಯಕ್ರಮಗಳು ನಡೆಯಲಿದ್ದು, ಮುಕ್ತಾಯ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಭಾಗವಹಿಸುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?