ಮಂಡ್ಯ: ರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಕೃಷಿ ನೀತಿ ರೂಪಿಸದ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ ಕೊಲೆ ಗಡುಕರು ಎಂದು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುಡಿಯುವ ವರ್ಗದ ಜನರು ಆತ್ಮಹತ್ಯೆ ಮಾಡಿ ಕೊಳ್ಳು ತ್ತಿದ್ದರೆ ಅದಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಮೂಲಕ ಯೋಜನೆಗಳನ್ನು ರೂಪಿಸಬೇಕು. ಅದನ್ನು ಬಿಟ್ಟು ನರೇಂದ್ರ ಮೋದಿ ಸರ್ಕಾರದ ಸಚಿವರು ರೈತರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದರೆ, ಮೋದಿ ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದರು.
ರೈತರು ತಮ್ಮ ಸಂಕಷ್ಟಕ್ಕಾಗಿ ಚಿನ್ನಾಭರಣಗಳನ್ನು ಗಿರವಿ ಇಟ್ಟಿದ್ದಾರೆ. ಅವುಗಳನ್ನುಖಾಸಗಿ ಹಣಕಾಸು ಸಂಸ್ಥೆಗಳು ಯಾವುದೇ ಕಾರಣಕ್ಕೂ ಹರಾಜು ಹಾಕಬಾರದು. ಈ ವಿಷಯವಾಗಿ ರೈತ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡು ಸಂಬಂಧಿಸಿದ ಖಾಸಗಿ ಹಣಕಾಸು ಸಂಸ್ಥೆಗಳ ಎದುರು ಹೋರಾಟ ನಡೆಸುವುದಾಗಿ ತಿಳಿಸಿದರು.
ಕೃಷ್ಣ ಜತೆ ಸೋನಿಯಾ ಚರ್ಚೆ
ರಾಜ್ಯದಲ್ಲಿ ಮುಂದುವರಿಯುತ್ತಿರುವ ರೈತರ ಆತ್ಮಹತ್ಯೆ ಕಾಂಗ್ರೆಸ್ ವರಿಷ್ಠರಲ್ಲೂ ಆತಂಕ ಮೂಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಕರೆ ಮಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸೋಮವಾರ ಬೆಳಗ್ಗೆ ಎರಡು ಬಾರಿ ಕೃಷ್ಣ ಅವರಿಗೆ ಕರೆ ಮಾಡಿರುವ ಸೋನಿಯಾ, ರಾಜ್ಯ ಸರ್ಕಾರಕ್ಕೆ ಮತ್ತು ಪ್ರದೇಶ ಕಾಂಗ್ರೆಸ್ ಘಟಕಕ್ಕೆ ಈ ವಿಚಾ ರದಲ್ಲಿ ತಮ್ಮ ಅನುಭವದ ಸಲಹೆ ನೀಡುವಂತೆ ಮನವಿ ಮಾಡಿದ್ದಾರೆ. ಹೆಚ್ಚುತ್ತಿರುವ ರೈತರ ಆತ್ಮಹತ್ಯೆಗೆ ಕಾರಣಗಳೇನು? ಸರ್ಕಾರ ಮತ್ತು ಸಚಿವರು ಈ ಸಮಸ್ಯೆಗೆ ಯಾವ ರೀತಿ ಸ್ಪಂದಿಸಬೇಕು? ಪಕ್ಷ ಮತ್ತು ಸರ್ಕಾರದ ಜವಾಬ್ದಾರಿ ಏನು ಎಂಬ ಬಗ್ಗೆ ಮಾಹಿತಿ ನೀಡಿ ಎಂದೂ ಸೂಚನೆ ನೀಡಿರುವುದಾಗಿ ಗೊತ್ತಾಗಿದೆ.