ಸಾದಂರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಆಭರಣ ಕದ್ದ ಕಳ್ಳ ಶಿಕ್ಷಕಿ ಸೆರೆ

ಪಕ್ಕದ ಮನೆಯಲ್ಲಿ 4 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಮುತ್ತೂಟ್ ಫಿನ್‌ಕಾರ್ಫ್ ಮತ್ತು ಇತರೆ ಮಾರ್ವಾಡಿ...

ಬೆಂಗಳೂರು: ಪಕ್ಕದ ಮನೆಯಲ್ಲಿ 4 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಮುತ್ತೂಟ್ ಫಿನ್‌ಕಾರ್ಫ್ ಮತ್ತು ಇತರೆ ಮಾರ್ವಾಡಿ ಅಂಗಡಿಗಳಲ್ಲಿ ಗಿರವಿ ಇಟ್ಟಿದ್ದ ಶಿಕ್ಷಕಿಯನ್ನು ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ.
ವಿನಾಯಕನಗರದ ಶೆಹನಾಜ್ (36) ಬಂಧಿತ ಆರೋಪಿಯಾಗಿದ್ದು, ಈಕೆ ಮಡಿವಾಳದ ಖಾಸಗಿ ಶಾಲೆಯೊಂದರಲ್ಲಿ ಉರ್ದು ಶಿಕ್ಷಕಿಯಾಗಿದ್ದಾರೆ, ಆರೋಪಿಯು ಕಳೆದ ಜು. 21ರಂದು ರಾತ್ರಿ ಪಕ್ಕದ ಮನೆಯ ಅಜ್ಮಲ್ ಅವರು ಹೃದ್ರೋಗದಿಂದ ಬಳಲುತ್ತಿದ್ದ ತಂದೆಯನ್ನು ಜಯದೇವ ಆಸ್ಪತ್ರಗೆ ಚಿಕಿತ್ಸೆಗೆ ಕರೆದುಕೊಂಡು ಹೋಗುವಾಗ ನಂಬಿಕೆಯ ಮೇಲೆ ಮನೆಯನ್ನು ನೋಡಿಕೊಳ್ಳಲು ಹೇಳಿ ಹೋಗಿದ್ದಾಗ ಅಲ್ಮೆರಾದಲ್ಲಿದ್ದ 162.5 ಗ್ರಾಂ. ತೂಕದ ಚಿನ್ನದ ಒಡವೆಗಳನ್ನು ಕಳವು ಮಾಡಿದ್ದರು..
ಅಜ್ಮಲ್ ಅವರ ತಂದೆ ಚಿಕಿತ್ಸೆ ಫಲಕಾರಿಯಾಗದೇ ಜು. 22ರ ನಸುಕಿನಲ್ಲಿ ಮೃತಪಟ್ಟಿದ್ದು, ಅಂತ್ಯಕ್ರಿಯೆ ಇನ್ನಿತರ ಕಾರ್ಯಗಳನ್ನು ಮುಗಿಸಿ ಅಲ್ಮೇರಾದಲ್ಲಿ ನೋಡಿದಾಗ ಚಿನ್ನಾಭರಣಗಳು ಕಳವಾಗಿದ್ದವು.
ಈ ಸಂಬಂಧ ಜೆ.ಪಿ.ನಗರ ಪೊಲೀಸರಿಗೆ ಅಜ್ಮಲ್ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಶೆಹನಾಜ್ ಅವರನ್ನು ಕರೆಸಿ ವಿಚಾರಣೆ ನಡೆಸಿದಾಗ ಕಳವು ಮಾಡಿ ಗಿರವಿ ಇಟ್ಟಿರುವುದನ್ನು ಒಪ್ಪಿಕೊಂಡಿದ್ದಾರೆ.
ಅವರಿವರ ಬಳಿ ಮಾಡಿ ಕೊಂಡ ಕೈಸಾಲ ತೀರಿಸಲು ಸಾಧ್ಯವಾಗದೇ ಇರುವುದರಿಂದ ಚಿನ್ನಾಭರಣಗಳನ್ನು ಕಳವು ಮಾಡಿ ಅವುಗಳನ್ನು ಗಿರವಿ ಇಟ್ಟು ಅದರಿಂದ ಬಂದ ಹಣವನ್ನು ಸಾಲ ನೀಡಿದವರಿಗೆ ನೀಡಲು ಆಕೆ ಯೋಜಿಸಿರುವುದು ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ಡಿಸಿಪಿ ಲೋಕೇಶ್‍ಕುಮಾರ್ ತಿಳಿಸಿದ್ದಾರೆ..
ಆರೋಪಿಯಿಂದ 4 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!