ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮತ್ತೆ ಐವರು ರೈತರು ಸಾವಿಗೆ ಶರಣು

ಹಾಸನ ಜಿಲ್ಲೆಯ ಇಬ್ಬರು ಸೇರಿ ರಾಜ್ಯದಲ್ಲಿ ಐವರು ರೈತರು ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಕಲೇಶಪುರ ತಾಲೂಕಿನ ಕೊರಡಿ ಗ್ರಾಮದ ರೈತ ಮಹೇಂದ್ರ...

ಬೆಂಗಳೂರು: ಹಾಸನ ಜಿಲ್ಲೆಯ ಇಬ್ಬರು ಸೇರಿ ರಾಜ್ಯದಲ್ಲಿ ಐವರು ರೈತರು ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಕಲೇಶಪುರ ತಾಲೂಕಿನ ಕೊರಡಿ ಗ್ರಾಮದ ರೈತ ಮಹೇಂದ್ರ ವಿಷ ಸೇವಿಸಿದ್ದಾರೆ. ಅವರು ಬೆಳೆದಿದ್ದ ಶುಂಠಿ ಬೆಳೆ ಕೊಳೆ ರೋಗದಿಂದ ನಾಶವಾಗಿತ್ತು. ಒಟ್ಟು ರೂ. 3ಲಕ್ಷಕ್ಕೂ ಹೆಚ್ಚು ಸಾಲವಿತ್ತು. ಇದರಿಂದ ತಮ್ಮ ಜಮೀನಿನನಲ್ಲಿ ವಿಷ ಸೇವಿಸಿ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರು ಗ್ರಾಮ ರೈತ ಮರುವೇಗೌಡ (60) ನೇಣಿಗೆ ಕೊರಳೊಡ್ಡಿದ್ದಾರೆ. ಅವರು ಹಸುಗಳ ಸಾಕಣೆಗೆ ಬ್ಯಾಂಕ್‍ನಿಂದ ರೂ. 80 ಸಾವಿರ ಸಾಲ ಮಾಡಿದ್ದರು. ಜಮೀನಿನಲ್ಲಿ ಬಾಳೆ ಹಾಗೂ ಇತರೆ ಬೆಳೆಗೆ ರೂ. 3 ಲಕ್ಷ ಕೈ ಸಾಲ ಮಾಡಿದ್ದರು.

ಹೊನ್ನಾಳಿ ತಾಲೂಕಿನ ನರಗಿನಕೆರೆಯ ರೈತ ರುದ್ರೇಶಪ್ಪ (60) ವಿಷ ಸೇವಿಸಿ ಪ್ರಾಣಬಿಟ್ಟಿದ್ದಾರೆ. ಅವರು 4 ಎಕರೆ ಬಗರ್ ಹುಕುಂ ಜಮೀನಿನಲ್ಲಿ ಬೆಳೆದ ಬೆಳೆ ಕೈಕೊಟ್ಟಿತ್ತು. ರೂ. 2ಲಕ್ಷ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ವಿಷ ಕುಡಿದಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ.  ಗುಬ್ಬಿ ತಾಲೂಕಿನ ಕಾರೇ ಕುರ್ಚಿ ಗ್ರಾಮದ ರೈತ ರೇಣುಕಾರಾಧ್ಯ ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಹಲವೆಡೆಒಟ್ಟು ಐದು ಲಕ್ಷ ರೂ. ಸಾಲ ಮಾಡಿದ್ದರು. ಸಾಲಬಾಧೆಯಿಂದ ನೊಂದು ವಿಷ ಸೇವಿಸಿದ್ದ ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪದ ಶೇಖರ ಬೋವಿ ಬುಧವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಜುಲೈ 23 ರಂದು ವಿಷ ಸೇವಿಸಿದ್ದರು. ಕೂಡಲೇ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಿಎಂ-ರಮ್ಯಾ ಭೇಟಿ
ಮಂಡ್ಯ ಮಾಜಿ ಸಂಸದೆ ರಮ್ಯಾ ಅವರು ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಂಡ್ಯ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!