ಬಿಬಿಎಂಪಿ ಕಚೇರಿ 
ಜಿಲ್ಲಾ ಸುದ್ದಿ

ಬೆ.10ರೊಳಗೆ ಕರ್ತವ್ಯಕ್ಕೆ ಹಾಜರಿರಬೇಕು: ಅಧಿಕಾರಿಗಳಿಗೆ ಜಿ.ಕುಮಾರ್ ನಾಯಕ್ ಎಚ್ಚರಿಕೆ

ಬಿಬಿಎಂಪಿಯ ವಿವಿಧ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿದ ಆಯುಕ್ತ ಜಿ.ಕುಮಾರ್ ನಾಯಕ್, ಅಧಿಕಾರಿಗಳು ಹಾಗೂ ನೌಕರರು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಿರಬೇಕು ಎಂದು ಸೂಚಿಸಿದ್ದಾರೆ...

ಬೆಂಗಳೂರು: ಬಿಬಿಎಂಪಿಯ ವಿವಿಧ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿದ ಆಯುಕ್ತ ಜಿ.ಕುಮಾರ್ ನಾಯಕ್, ಅಧಿಕಾರಿಗಳು ಹಾಗೂ ನೌಕರರು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಿರಬೇಕು ಎಂದು ಸೂಚಿಸಿದ್ದಾರೆ.

ನಗರ ಯೋಜನೆ, ಜಾಹೀರಾತು, ಘನತ್ಯಾಜ್ಯ ವಿಲೇವಾರಿ, ಲೆಕ್ಕಪತ್ರ, ಮಾಹಿತಿ ತಂತ್ರಜ್ಞಾನ, ಎಂಜಿನಿಯರಿಂಗ್, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಅವರು, ಕಚೇರಿಯಲ್ಲಿ ಹಾಜರಿರದ ಅಧಿಕಾರಿ ಹಾಗೂ ನೌಕರರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಇನ್ನು ಮುಂದೆ ಅಧಿಕಾರಿ ಹಾಗೂ ನೌಕರರು ಕುಳಿತುಕೊಳ್ಳುವ ಮೇಜಿನ ಮೇಲೆ ಹುದ್ದೆ ಹಾಗೂ ಹೆಸರು ಇರುವ ನಾಮಫಲಕಗಳನ್ನು ಕಡ್ಡಾಯವಾಗಿ ಇಡಬೇಕು. ಯಾವುದೇ ಮೇಜು ಖಾಲಿ ಇರಬಾರದು. ಒಂದು ವೇಳೆ ಕಚೇರಿ ಬಿಟ್ಟು ಹೊರಗೆ ಹೋಗುವುದಿದ್ದರೆ, ಎಲ್ಲಿಗೆ, ಯಾವ ಕೆಲಸಕ್ಕೆ ಎಂದು ಬರೆದಿಟ್ಟು ಹೋಗಬೇಕು.

ಕೆಲವು ಅಧಿಕಾರಿಗಳು ತಪಾಸಣೆ ಎಂಬ ನೆಪ ಹೇಳಿ ಸಮಯ ವ್ಯರ್ಥ ಮಾಡುತ್ತಾರೆ. ಹೀಗಾಗಿ ತಪಾಸಣೆಗೆ ಹೋಗುವ ಅಧಿಕಾರಿಗಳ ಹೆಸರನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಲಾಗುವುದು.
ತಪಾಸಣೆಗೆ ಹೋಗದಿರುವವರ ಮತ್ತೊಂದು ಪಟ್ಟಿಯನ್ನೂ ಸಿದ್ಧಪಡಿಸಲಾಗುತ್ತದೆ. ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದ್ದು, ಯಾರು, ಯಾವ ಸಮಯಕ್ಕೆ ಕಚೇರಿಗೆ ಬರುತ್ತಾರೆ ಎಂಬ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ. ತಡವಾಗಿ ಬಂದ ನೌಕರರ ಮೇಲೆ ಕೆಪಿಎಸ್‍ಆರ್ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕುಮಾರ್ ನಾಯಕ್ ಎಚ್ಚರಿಸಿದರು.

ಕಚೇರಿಗಳ ಕಾರಿಡಾರ್ ಹಾಗೂ ಒಳ ಆವರಣ ಶುದ್ಧವಾಗಿರಬೇಕು. ಅನವಶ್ಯಕ ಕಾಗದಪತ್ರ, ಅಲ್ಮೇರಾ, ಹಳೆಯ ಕಂಪ್ಯೂಟರ್ ಸೇರಿದಂತೆ ಬಳಸದಿರುವ ಸಾಮಗ್ರಿಗಳನ್ನು ಕಚೇರಿಯಲ್ಲಿ ಇಟ್ಟುಕೊಳ್ಳಬಾರದು. ಯಾವುದೇ ಕಚೇರಿಯಲ್ಲಿ ಕಡತಗಳನ್ನು ಕೊಳೆಸದೆ ಸಾಧ್ಯವಾದಷ್ಟು ಶೀಘ್ರ ವಿಲೇವಾರಿ ಮಾಡಬೇಕು. ಮೇಜು, ಕುರ್ಚಿಗಳನ್ನು ಶುಚಿಯಾಗಿಟ್ಟುಕೊಂಡು, ಸಾರ್ವಜನಿಕರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು ಎಂದು ಇಲಾಖೆಯ ಮುಖ್ಯಸ್ಥರಿಗೆ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ