ತಹಸೀಲ್ದಾರ್ ನೀಡಿದ್ದು ನೋಟಿಸ್ ಮಾತ್ರ, ತೆರವುಗೊಳಿಸಲು ಅಲ್ಲ: ಹೈಕೋರ್ಟ್ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ತಹಸೀಲ್ದಾರ್ ನೀಡಿದ್ದು ನೋಟಿಸ್ ಮಾತ್ರ, ತೆರವುಗೊಳಿಸಲು ಅಲ್ಲ: ಹೈಕೋರ್ಟ್

ಬಾಣಸವಾಡಿ ಕೆರೆ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರಿಗೆ ತಹಸೀಲ್ದಾರ್ ನೀಡಿರುವ ನೋಟಿಸ್ ಕೇವಲ ನೋಟಿಸ್ ಆಗಿ ಪರಿಗಣಿಸಬೇಕೆ ಹೊರತು ತೆರವುಗೊಳಿಸುವಂತೆ ನೀಡಿರುವ ಆದೇಶವಲ್ಲ ಎಂದು ಹೈಕೋರ್ಟ್ ಆದೇಶಿಸಿದೆ...

ಬೆಂಗಳೂರು: ಬಾಣಸವಾಡಿ ಕೆರೆ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರಿಗೆ ತಹಸೀಲ್ದಾರ್ ನೀಡಿರುವ ನೋಟಿಸ್ ಕೇವಲ ನೋಟಿಸ್ ಆಗಿ ಪರಿಗಣಿಸಬೇಕೆ ಹೊರತು ತೆರವುಗೊಳಿಸುವಂತೆ ನೀಡಿರುವ ಆದೇಶವಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಬಾಣಸವಾಡಿ ಕೆರೆ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್ ಅನಧಿಕೃತ ಒತ್ತುವರಿಯನ್ನು 2015, ಜ.5ರೊಳಗಾಗಿ ತೆರವುಗೊಳಿಸಿ, ಜಮೀನನ್ನು ಸರ್ಕಾರದ ವಶಕ್ಕೆ ನೀಡಬೇಕು. ಅದು ತಪ್ಪಿದ್ದಲ್ಲಿ ಒತ್ತುವರಿ ತೆರವುಗೊಳಿಸುವ ಕ್ರಮಕ್ಕೆ ತಗಲುವ ವೆಚ್ಚವನ್ನು ಒತ್ತುವರಿದಾರರಿಂದಲೇ ವಸೂಲಿ ಮಾಡಬೇಕಾಗುತ್ತದೆ. ಮಾತ್ರವಲ್ಲದೇ ಕರ್ನಾಟಕ ಭೂ  ಕಂದಾಯ ಕಾಯ್ದೆ 1964ರ ಅನ್ವಯ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ತಹಸೀಲ್ದಾರ್ 2014, ಡಿ.29ರಂದು ನೋಟಿಸ್ ನೀಡಿದ್ದರು.

ಇದನ್ನು ಪ್ರಶ್ನಿಸಿ ಸ್ಥಳೀಯರಾದ ಬಾಲಚಂದ್ರನ್ ಸೇರಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾ.ಅಶೋಕ್ ಬಿ ಹಿಂಚಿಗೇರಿ ಅವರಿದ್ದ ಏಕಸದಸ್ಯ ಪೀಠ, ತಹಸೀಲ್ದಾರ್
ನೀಡಿರುವ ನೋಟಿಸ್‍ಗೆ ಅರ್ಜಿದಾರರು ಆಕ್ಷೇಪಣೆ ಸಲ್ಲಿಸಬೇಕು. ಆಕ್ಷೇಪಣೆಯಲ್ಲಿನ ಅಂಶವನ್ನು ಕೂಲಂಕುಷವಾಗಿ ಪರಿಗಣಿಸಿ ನಂತರ ಆದೇಶ ಹೊರಡಿಸಬೇಕು. ಅಲ್ಲಿಯವರೆಗೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿ ದಿಢೀರ್ ನಿರ್ಧಾರ ತೆಗೆದುಕೊಳ್ಳಬಾರದು ಎಂದು ನಿರ್ದೇಶಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಕೆರೆ ಒತ್ತುವರಿಗೆ ಸಂಬಂಧಿಸಿದಂತೆ ತಾತ್ಕಾಲಿಕವಾಗಿ ವಸತಿ ನಿವೇಶನಗಳನ್ನು ತೆರವುಗೊಳಿಸದಂತೆ ಸರ್ಕಾರ ತೀರ್ಮಾನಿಸಿದೆ. ಒತ್ತುವರಿ ಕುರಿತು ಸಮಗ್ರ ನೀತಿ ಹಾಗೂ ಕ್ರಿಯಾ ಯೋಜನೆ ರೂಪಿಸುವಂತೆ ಸರ್ಕಾರ ಸಮಿತಿ ರಚಿಸಿರುವುದಾಗಿ ಪೀಠದ ಗಮನಕ್ಕೆ ತಂದರು. ಸ್ರಕಾರಿ ವಕೀಲರ ವಾದ ಪರಿಗಣಿಸಿದ ಏಕಸದಸ್ಯ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ನೀತಿ ಹಾಗೂ ಕ್ರಿಯಾ ಯೋಜನೆ ರೂಪಿಸುವ ಕುರಿತು ಸರ್ಕಾರ ಶೀಘ್ರ ನಿರ್ಧಾರ ತೆಗೆದುಕೊಳ್ಳಬೇಕು. ಕೆರೆ ಜಾಗ ಪುನಃ ಸ್ಥಾಪಿಬೇಕಾದಲ್ಲಿ ಬಿಡಿಎ ನಿವೇಶನ ಮತ್ತು ಖಾಸಗಿ ನಿವೇಶನದಲ್ಲಿ ಎಂದು ತಾರತಮ್ಯ ಮಾಡಬಾರದು. ಎಲ್ಲಿರಿಗೂ ಒಂದೇ ಬಗೆಯ ಕಾನೂನು ಅನ್ವಯವಾಗಲಿದ್ದು ತಾರತಮ್ಯ ರಹಿತವಾಗಿ ಸರ್ಕಾರ ನಡೆದುಕೊಳ್ಳಬೇಕು ಎಂದು ಆದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ