ಬೆಳ್ಳಂದೂರು ಕೆರೆ 
ಜಿಲ್ಲಾ ಸುದ್ದಿ

ಕೆರೆ ನೊರೆಗೆ ಶಾಂಪೂ ಕಾರಣ!: ವಿಜಯ್ ಕುಮಾರ್

ನಗರದ ಬೆಳ್ಳಂದೂರು ಕೆರೆ ನೊರೆಗೆ ಅಪಾರ್ಟ್‍ಮೆಂಟ್ ಅಶುಚಿ ಮತ್ತು ಶಾಂಪೂ ಕಾರಣವಂತೆ...!...

ಬೆಂಗಳೂರು: ನಗರದ ಬೆಳ್ಳಂದೂರು ಕೆರೆ ನೊರೆಗೆ ಅಪಾರ್ಟ್‍ಮೆಂಟ್ ಅಶುಚಿ ಮತ್ತು ಶಾಂಪೂ ಕಾರಣವಂತೆ...!

ಹೀಗೆಂದು ಹೇಳಿದ್ದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ವಿಜಯ್ ಕುಮಾರ್. ಅರಣ್ಯ ಸಚಿವ ರಮಾನಾಥ್ ರೈ ಪತ್ರಿಕಾಗೋಷ್ಠಿಯಲ್ಲಿ ವರದಿಗಾರರು ಕೆರೆ ನೊರೆ ಬಗ್ಗೆ ಪ್ರಶ್ನಿಸಿದರು. ಆಗ `ಈ ಬಗ್ಗೆ ನಮ್ಮ ವಿಜಯ್ ಕುಮಾರ್ ಮಾಹಿತಿ ನೀಡುತ್ತಾರೆ' ಎಂದು ಸಚಿವರು ಸದಸ್ಯ ಕಾರ್ಯದರ್ಶಿ ಅವರತ್ತ ಕೈ ತೋರಿದರು. ಆಘ ಮಾಧ್ಯಮದವರಿಗೆ ವಿವರಣೆ ನೀಡಿದ ವಿಜಯ್ ಕುಮಾರ್ ಈ ಮಾಹಿತಿ ನೀಡಿದ್ದಾರೆ.  

ಕೆರೆಯಲ್ಲಿ ನೊರೆ ಬರುವುದಕ್ಕೆ ಮುನ್ನವೇ ನಾವು ಅಲ್ಲಿಗೆ ಭೇಟಿ ನೀಡಿದ್ದೇವೆ. ಬಳಿಕ ಮತ್ತೆ ಪರಿಶೀಲನೆ ನಡೆಸಿದ್ದೇವೆ. ಇದಕ್ಕೆ ಕೈಗಾರಿಕೆ ತ್ಯಾಜ್ಯ ಕಾರಣವಲ್ಲ. ಕೈಗಾರಿಕಾ ತ್ಯಾಜ್ಯ ಈ ಕೆರೆಗೆ ಸೇರುವುದೇ ಇಲ್ಲ. ಬೆಳ್ಳಂದೂರು ಕೆರೆ ಸುತ್ತಮುತ್ತ 50ಕ್ಕೂ ಹೆಚ್ಚು ಅಪಾರ್ಟ್‍ಮೆಂಟ್‍ಗಳಿವೆ. ಇಲ್ಲಿ ಬಳಕೆಯಾದ ನೀರನ್ನು ಸಂಸ್ಕರಣೆ ಮಾಡುತ್ತಿಲ್ಲ. ಹೀಗಾಗಿ ಅಶುದ್ಧ ನೀರು, ಬಳಕೆಯಾದ ಶಾಂಪೂ ನೀರು ಕೆರೆಯನ್ನು ಸೇರಿ ನೊರೆ ಸೃಷ್ಟಿಸಿದೆ ಎಂದು ವಿವರಿಸಿದರು.

ಈ ಹಿನ್ನೆಲೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಮತ್ತು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವಂತೆ ಜಲಮಂಡಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಚನೆ ನೀಡ
ಲಾಗಿದೆ. ಬೆಂಗಳೂರು ನಗರದಲ್ಲಿ ಸಂಸ್ಕರಣಾ ಘಟಕಗಳು (ಎಸ್‍ಟಿಪಿ ) ಸಾಕಷ್ಟು ಪ್ರಮಾಣದಲ್ಲಿ ಇಲ್ಲ. ಈ ಹಿನ್ನೆಲೆಯಲ್ಲಿ ಎಸ್‍ಟಿಪಿ ರಚಿಸುವಂತೆ ಸೂಚನೆ ನೀಡಿದ್ದೇವೆ ಎಂದರು.
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ವಾಮನಾಚಾರ್ಯ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT