ಮಾಜಿ ಶಾಸಕ ಅರಗ ಜ್ಞಾನೇಂದ್ರ ಮತ್ತು ಮೃತ ಬಾಲಕಿ ನಂದಿತಾ 
ಜಿಲ್ಲಾ ಸುದ್ದಿ

ನಂದಿತಾ ಸಾವು ಪ್ರಕರಣ ಗಲಭೆ: ಮಾಜಿ ಶಾಸಕ ಅರಗ ಜ್ಞಾನೇಂದ್ರ ವಿರುದ್ಧ ಚಾರ್ಜ್ ಶೀಟ್

ತೀರ್ಥಹಳ್ಳಿ ಬಾಲಕಿ ನಂದಿತ ಸಾವಿನ ಪ್ರಕರಣ ನಂತರ ನಡೆದ ಗಲಭೆ ಸಂಬಂಧ ಮಾಜಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ 47 ಮಂದಿ ವಿರುದ್ಧ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಶಿವಮೊಗ್ಗ: ತೀರ್ಥಹಳ್ಳಿ ಬಾಲಕಿ ನಂದಿತ ಸಾವಿನ ಪ್ರಕರಣ ನಂತರ ನಡೆದ ಗಲಭೆ ಸಂಬಂಧ ಮಾಜಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ 47 ಮಂದಿ ವಿರುದ್ಧ ಪೊಲೀಸರು ಶುಕ್ರವಾರ ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. 2014 ರಲ್ಲಿ ನಂದಿತಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಹೀಗಾಗಿ ಇಡೀ ತೀರ್ಥಹಳ್ಳಿ ಹೊತ್ತಿ ಉರಿದಿತ್ತು.

8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಂದಿತಾ 2014 ಅಕ್ಟೋಬರ್ 29 ರಂದು  ಆನಂದಗಿರಿ ಬೆಟ್ಟದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ನಂತರ ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಅಕ್ಟೋಬರ್ 31 ರಂದು ನಂದಿತಾ ಸಾವನ್ನಪ್ಪಿದ್ದಳು. ನಂತರ ತೀರ್ಥಹಳ್ಳಿಯಲ್ಲಿ ದೊಡ್ಡ ಗಲಭೆಯೇ ನಡೆದಿತ್ತು. ಹೀಗಾಗಿ ಸುಮಾರು 15 ದಿನಗಳ ಕಾಲ ನಿಷೇದಾಜ್ಞೆ ಜಾರಿ ಮಾಡಲಾಗಿತ್ತು.

ಗಲಭೆ ಪ್ರಕರಣ ಸಂಬಂಧ ಮಾಜಿ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ 47 ಜನರ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಶಾಂತಿ ಭಂಗ, ಸಾರ್ವಜನಿಕ ಆಸ್ತಿ ನಷ್ಟ, ಪೊಲೀಸ್ ವಾಹನ ಜಖಂ ಹಾಗೂ 144 ಸೆಕ್ಷನ್ ಉಲ್ಲಂಘನೆ ಆರೋಪಗಳ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ಈ ಗಲಭೆಯ ನಂತರ ಸರ್ಕಾರ ನಂದಿತಾ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ವಿಚಾರಣೆ ನಡೆಸಿದ ಸಿಐಡಿ ಪೊಲೀಸರು ನಂದಿತಾ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT