ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ 
ಜಿಲ್ಲಾ ಸುದ್ದಿ

ಕೇಂದ್ರ, ರಾಜ್ಯ ಸರ್ಕಾರ ನಾಜೂಕು ಕಳ್ಳರು: ಕೋಡಿಹಳ್ಳಿ ಚಂದ್ರಶೇಖರ್

ರೈತರಿಗೋಸ್ಕರ ನಮ್ಮ ಸರ್ಕಾರ ಎಂದು ಹೇಳುತ್ತಲೆ, ರೈತರ ಅನ್ನವನ್ನು ಕಸಿಯುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಜೂಕು ಕಳ್ಳರು ಎಂದು...

ಬೆಂಗಳೂರು: ರೈತರಿಗೋಸ್ಕರ ನಮ್ಮ ಸರ್ಕಾರ ಎಂದು ಹೇಳುತ್ತಲೆ, ರೈತರ ಅನ್ನವನ್ನು ಕಸಿಯುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಜೂಕು ಕಳ್ಳರು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಮೇಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರ ಧೋರಣೆಗಳು ನಾವು ಖಂಡಿಸುತ್ತಿದ್ದೇವೆ. ಕೇಂದ್ರ ಸರ್ಕಾರದ ಭೂಸ್ವಾಧೀನ ಕಾಯ್ದೆಯನ್ನು ತಕ್ಷಣ ಕೈಬಿಡಬೇಕು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ  ಒತ್ತಾಯಿಸಿ ಜೂ.22ರಂದು ರಾಯಚೂರಿನಲ್ಲಿ ಬೃಹತ್ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಯುಪಿಎ ಸರ್ಕಾರ ರೈತರನ್ನು ನಿರ್ಲಕ್ಷಿಸಿತ್ತು. ಆದರೆ ಈಗಿನ ಎನ್ಡಿಎ ಸರ್ಕಾರ ರೈತವರ್ಗವನ್ನು ನಿರ್ಲಕ್ಷಿಸುವುದರ ಜೊತೆಗೆ ಅವರಿಂದ ಬಲವಂತವಾಗಿ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಒಂದು ಟನ್ ರಸಗೊಬ್ಬರದ ಬೆಲೆಯನ್ನು 2786 ರೂ. ಹೆಚ್ಚಿನ ರೈತರ ಮೇಲೆ ಪ್ರಹಾರ ಮಾಡಿದೆ. ಇದಲ್ಲದೆ ಕನಿಷ್ಠ ಬೆಂಬಲ ಬೆಲೆಯಿಂದ 28 ಕೃಷಿ ಉತ್ಪನ್ನಗಳನ್ನು ಕೈಬಿಡಲಾಗಿದೆ. ಮಾತ್ರವಲ್ಲ ರೈತರಿಗೆ ಮರಣ ಶಾಸನವಾಗಿರುವ ಭೂಸ್ವಾಧೀನ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಹೊರಡಿಸಿದೆ. ಇವೆಲ್ಲವೂ ರೈತರ ಬದುಕನ್ನು ದುರ್ಬಲಗೊಳಿಸಲಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕೂಡ 2 ವರ್ಷ ಪೂರೈಸಿದ್ದು, ಈ ಅವಧಿಯಲ್ಲಿ ರೈತರಿಗೆ ಏನೂ ಮಾಡಿಲ್ಲ. ಕಬ್ಬಿನ ಬಾಕಿ ಕೊಡಿಸಲು ಇನ್ನೂ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಭತ್ತ, ಜೋಳ, ಖರೀದಿ ಕೇಂದ್ರಗಳು ರೈತರಿಗೆ ಸಹಾಯಕವಾಗಲಿಲ್ಲ. ನೀರಾವರಿ ಯೋಜನೆಗಳು ಮುಂದಕ್ಕೆ ಹೋಗಲೆ ಇಲ್ಲ ಎಂದು ಆರೋಪಿಸಿದ ಅವರು, ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಪ್ರತಿ ವರ್ಷ 5000 ಕೋಟಿ ರೂ.ಗಳ ಪ್ರತ್ಯೇಕ ನಿಧಿ ಸ್ಥಾಪಿಸಬೇಕು. ರೈತರ ಬೆಳೆ ರಕ್ಷಣೆಗಾಗಿ ಬೆಳೆ ಮಾರುಕಟ್ಟೆಗೆ ಬರುವ 15 ದಿನ ಮುಂಚಿತವಾಗಿ ಸಕರ್ಾರ ಖರೀದಿ ಕೇಂದ್ರ ಸ್ಥಾಪಿಸಬೇಕು. ಇದಕ್ಕೆ ಪ್ರತಿವರ್ಷ 5000 ಕೋಟಿ ರೂ. ಆವರ್ತನಿಧಿ ಸ್ಥಾಪಿಸಬೇಕು. ರಾಜ್ಯದಲ್ಲಿ ನಕಲಿ ಬೀಜ, ರಸಗೊಬ್ಬರ, ಕೀಟನಾಶಕಗಳ ಹಾವಳಿ ತಡೆಯಲು ಕಾನೂನು ಜಾರಿ ಮಾಡಬೇಕು. ರೇಷ್ಮೆ ಆಮದು ಸುಂಕವನ್ನು ಶೇ.31ರಷ್ಟು ಹೆಚ್ಚಿಸಿ ರೈತರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

ನೀರಾವರಿ ಯೋಜನೆಗಳಿಗೆ ಪ್ರತಿ ವರ್ಷ ಕನಿಷ್ಠ 25 ಸಾವಿರ ಕೋಟಿ ರೂ. ಮೀಸಲಿಟ್ಟು, ಯೋಜನೆಗಳನ್ನು ಶೀಘ್ರಗತಿಯಲ್ಲಿ ಮುಗಿಸಬೇಕು. ಸಮಾನ ವಿದ್ಯುಚ್ಛಕ್ತಿ ನೀತಿ ಜಾರಿ ಮಾಡಬೇಕು. ಬಗರ್ಹುಕುಂ ಸಾಗುವಳಿ ಜೀವನ ನಡೆಸುತ್ತಿರುವ ರೈತರಿಗೆ ಭೂಮಿಯನ್ನು ಸಕ್ರಮಗೊಳಿಸಲು ದಿನಾಂಕ ನಿಗದಿಪಡಿಸಬೇಕು. ಎಲ್ಲಾ ರೈತರ ಸಾಲ ಮನ್ನಾ ಮಾಡಬೇಕು. ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು.ಆನ್ಲೈನ್ ಮಾರುಕಟ್ಟೆ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಮಾರುಕಟ್ಟೆಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ವರ್ತಕರ ಮನವಿಗೆ ಸ್ಪಂದಿಸಿದ ಕೇಂದ್ರ; ದೀಪಾವಳಿ ನಂತರವೇ UPI ಮರ್ಚೆಂಟ್ ಶುಲ್ಕ ಜಾರಿ