ಬೆಂಗಳೂರು: ಹೈಕಮಾಂಡ್ ಕರೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜೂ.8ರಂದು ದೆಹಲಿಗೆ ತೆರಳಲಿದ್ದಾರೆ.
ಭೂ ಸ್ವಾಧೀನ ಕಾಯ್ದೆ ಸೇರಿದಂತೆ ಕೇಂದ್ರ ಸರ್ಕಾರದ ಪ್ರಮುಖ ನೀತಿಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಸಭೆ ಕರೆಯಲಾಗಿದೆ. ಜೂ.9ರಂದು ಸಭೆ ನಡೆಯಲಿದ್ದು, ಜೂ.8ರ ರಾತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣಿಸಲಿದ್ದಾರೆ.