ಭಾನುವಾರ ಮಾಜಿ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಮನೆಗೆ ತೆರಳಿದ ಕೇಂದ್ರ ಸಚಿವ ಅನಂತಕುಮಾರ್, ಪಕ್ಷದ ಸದಸ್ಯತ್ವ ಪಡೆದಿದ್ದಕ್ಕಾಗಿ ಶುಭಾಶಯ ಕೋರಿದರು. ಬಿಜೆಪಿ ನಗರ ಅಧ್ಯಕ್ಷ ಸುಬ್ಬು ನರ 
ಜಿಲ್ಲಾ ಸುದ್ದಿ

ಮಾಜಿ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಬಿಜೆಪಿಗೆ

ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ...

ಬೆಂಗಳೂರು: ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟಿಗ ವಿಜಯ್ ಭಾರದ್ವಾಜ್ ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಭಾನುವಾರ ಗಿರಿನಗರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಸಮ್ಮುಖದಲ್ಲಿ ಭಾರದ್ವಾಜ್ ಬಿಜೆಪಿ ಸೇರಿ ಪ್ರಾಥಮಿಕ ಸದಸ್ಯತ್ವ ಪಡೆದರು. ನಂತರ ಮಾತನಾಡಿದ ಭಾರದ್ವಾಜ್, ನರೇಂದ್ರ ಮೋದಿಯವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದೀಗ ಪಕ್ಷದ ಸದಸ್ಯತ್ವ ಪಡೆದಿರುವುದು ಖುಷಿ ತಂದಿದೆ. ರಾಜ್ಯ ಹಾಗೂ ದೇಶದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೊತ್ಸಾಹ ನೀಡುತ್ತಿಲ್ಲ, ಮುಂದಾದರೂ ಸರಿಯಾದ ಪ್ರೊತ್ಸಾಹ ಸಿಗುವ ಮೂಲಕ ಕ್ರೀಡಾನೀತಿಯಲ್ಲಿ ಪಾರದರ್ಶಕತೆ ಜಾರಿಗೊಳಿಸಲಿ. ಟೀಂ ಇಂಡಿಯಾಕ್ಕೆ ಪೂರ್ಣಾವಧಿ ಕೋಚ್ ಆಯ್ಕೆಯಲ್ಲಿ ಸ್ವದೇಶಿಗರ ಆಯ್ಕೆಕಗೆ ಆದ್ಯತೆ ಕೊಡಬೇಕು. ಟೀಂ ಇಂಡಿಯಾ ಕೋಚ್ ನೇಮಕದ ಸಂದರ್ಭದಲ್ಲಿ ನಮ್ಮ ದೇಶದವರಿಗೆ ಆದ್ಯತೆ ಕೊಡಬೇಕು ಎಂದರು.

ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ಮಾತನಾಡಿ, ವಿಜಯ್ ಭಾರದ್ವಾಜ್ ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸದ ವಿಚಾರ. ಅವರ ಆಗಮನದಿಂದ ಪಕ್ಷಕ್ಕೆ ಬಲ
ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೇಶಾದ್ಯಂತ ಮಹಾ ಸಂಪರ್ಕ ಅಭಿಯಾನದಡಿ ಹತ್ತು ಕೋಟಿ ಜನರನ್ನು ಸಂಪರ್ಕಿಸಲು ನಿರ್ಧರಿಸಿದ್ದಾರೆ ಎಂದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಸುಬ್ಬು ನರಸಿಂಹ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT