ಅತಿಥಿ ಉಪನ್ಯಾಸಕರು 
ಜಿಲ್ಲಾ ಸುದ್ದಿ

ಬೇಡಿಕೆಗಳನ್ನು ಈಡೇರಿಸದಿದ್ದರೆ ಶಿಕ್ಷಣ ಇಲಾಖೆ ಕಚೇರಿಗೆ ಮುತ್ತಿಗೆ: ಅತಿಥಿ ಉಪನ್ಯಾಸಕರು

ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಜೂನ್ 15ರಂದು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಬೆಂಗಳೂರು: ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಜೂನ್ 15ರಂದು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಮತ್ತು ಕರ್ನಾಟಕ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಎಚ್ಚರಿಸಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ವೈ.ಎಫ್.ಐ ರಾಜ್ಯ ಕಾರ್ಯದರ್ಶಿ ಗೌರವ ಅಧ್ಯಕ್ಷ ಬಿ. ರಾಜಶೇರಮೂರ್ತಿ, ಅತಿಥಿ ಉಪನ್ಯಾಸಕರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಡಾ. ಬರಗೂರು ರಾಮಚಂದ್ರಪ್ಪನವರ ಅಧ್ಯಕ್ಷತೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಲನ್ನೊಳಗೊಂಡ ಸಮಿತಿ ರಚಿಸಬೇಕು. ಖಾಯಂ ಉಪನ್ಯಾಸಕರ ಬೋಧನ ಅವಧಿಯನ್ನು ಈ ಹಿಂದೆ ಇದ್ದಂತೆ 16 ಗಂಟೆಗೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಫೆಬ್ರವರಿಯಲ್ಲಿ ಅತಿಥಿ ಉಪನ್ಯಾಕರು ಸೇರಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಕೈಗೊಂಡಿದ್ದಾಗ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ಆಶ್ವಾಸನೆ ನೀಡಿತ್ತು. ಆದರೆ ಅತಿಥಿ ಉಪನ್ಯಾಸಕರಿಗೆ ಕೊಟ್ಟ ಭರವಸೆಯಂತೆ ಸಮಿತಿ ರಚಿಸದೆ, ಏಕಾಏಕೆ ಬೀದಿಗೆ ತಳ್ಳುವ ಮೂಲಕ ರಾಜ್ಯ ಸರ್ಕಾರ ನಯವಂಚನೆ ಮಾಡಿದೆ ಎಂದು ಆರೋಪಿಸಿದ್ದರು.

ರಾಜ್ಯ ಸರ್ಕಾರ ಖಾಯಂ ಉಪನ್ಯಾಸಕರಿಗೆ ಬೋಧನ ಅವಧಿಯನ್ನು 22 ಗಂಟೆಗೆ ಏರಿಸಿದ್ದು ಅಲ್ಲದೆ ಹೊಸದಾಗಿ ಸಿಇಟಿ ಮುಖಾಂತರ 2190 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದರಿಂದ 12033 ರಷ್ಟು ಅತಿಥಿ ಉಪನ್ಯಾಸಕರು ಬೀದಿಗೆ ಬಿದ್ದಿದ್ದೇವೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT